Friday, October 25, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸಕ್ಕರೆ ಕಾರ್ಖಾನೆಗಳು ವ್ಯಾಪ್ತಿ ಮೀರಿ ಕಬ್ಬು ಕಟಾವು ಮಾಡಬಾರದು: ಜಿಲ್ಲಾಧಿಕಾರಿ

ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ಸಕ್ಕರೆ ಕಾರ್ಖಾನೆಗಳು ಮ್ಯಾಪಿಂಗ್ ಆಗಿರುವ ಪ್ರದೇಶವನ್ನು ಹೊರತುಪಡಿಸಿ ಬೇರೆ ಪ್ರದೇಶದ ಕಬ್ಬನ್ನು ಕಟಾವು ಮಾಡಬಾರದು. ಈ ಕುರಿತಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಇದೇ ಮರುಕಳಿಸಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ  ಎಚ್ಚರಿಕೆ ನೀಡಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಮಂಡ್ಯ ಜಿಲ್ಲೆಯ 2024 ನೇ ಸಾಲಿನ ಸಕ್ಕರೆ ಕಾರ್ಖಾನೆಗಳ ಪ್ರಗತಿ ಪರಿಶೀಲನೆ ಹಾಗೂ ಇತರೆ ವಿಷಯಗಳ ಬಗ್ಗೆ ಸಭೆ ನಡೆಸಿ ಮಾತನಾಡಿದರು.

2024- 25 ನೇ ಸಾಲಿನ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ಅರೆಯುವ ಪ್ರಕ್ರಿಯೆ ನಡೆಯುತ್ತಿದೆ. ಕಾರ್ಖಾನೆಗಳು ತಮ್ಮ ವ್ಯಾಪ್ತಿ ಮೀರಿ ಕಬ್ಬನ್ನು ಖರೀದಿ ಮಾಡುತ್ತಿರುವ ಬಗ್ಗೆ ಸಾಕಷ್ಟು ದೂರು ಕೇಳಿ ಬರುತ್ತಿವೆ ಎಂದರು.

ಜಿಲ್ಲೆಯ 5 ಸಕ್ಕರೆ ಕಾರ್ಖಾನೆಗಳು ಒಗ್ಗೂಡಿ ಸಾಮರಸ್ಯದಿಂದ ಕಾರ್ಯ ನಿರ್ವಹಿಸಿ. ಜೊತೆಗೆ ರೈತರಿಗೆ ಸಕಾಲದಲ್ಲಿ ಎಫ್ ಆರ್ ಪಿ ಪ್ರಕಾರವ14 ದಿನದೊಳಗಾಗಿ ಕಬ್ಬು ಖರೀದಿ ವೆಚ್ಚವನ್ನು ಪಾವತಿಸಿ ಎಂದರು.

ಮಂಡ್ಯ ಜಿಲ್ಲೆಗೆ ಹೊರ ಜಿಲ್ಲೆಯಿಂದ ಕಬ್ಬು ಕಟಾವು ಮಾಡಲು ಬರುವ ಕೂಲಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಕಾರ್ಖಾನೆಯ ಮಾಲೀಕರ ಕರ್ತವ್ಯವಾಗಿದ್ದು, ಅವರಿಗೆ ಮೂಲಭೂತ ವ್ಯವಸ್ಥೆ ಕಲ್ಪಿಸಿ ಎಂದರು.

ಮೈಶುಗರ್ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಡಾ: ಹೆಚ್ ಎಲ್ ನಾಗರಾಜು ಅವರು ಮಾತನಾಡಿ ಮೈಶುಗರ್ ಸಕ್ಕರೆ ಕಾರ್ಖಾನೆ ಸರ್ಕಾರಿ ಸೌಮ್ಯದ ಕಾರ್ಖಾನೆಯಾಗಿದ್ದು, ಸೇವಾ ವಲಯದಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಸೆಪ್ಟೆಂಬರ್ ಅಂತ್ಯದೊಳಗೆ 2.50 ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಲಾಗಿದೆ. ಈ ಕಬ್ಬು ಅರಿದ ನಂತರ ಉಳಿದರೆ ಮೈಶುಗರ್ ವ್ಯಾಪ್ತಿಯ ಕಬ್ಬನ್ನು ಬೇರೆ ಆಸಕ್ತ ಕಬ್ಬು ಕಾರ್ಖಾನೆಗೆ ನೀಡಲಾಗುವುದು ಎಂದರು.

ಇದಕ್ಕೆ ಪ್ರತಿಕ್ರಯಿಸಿದ ಜಿಲ್ಲಾಧಿಕಾರಿಗಳು ಐ.ಸಿ.ಎಲ್, ಚಾಂಶುಗರ್ ಸೇರಿದಂತೆ ಬೇರೆ ಕಾರ್ಖಾನೆಯ ಕಬ್ಬು ಜಟಾವು ಕಾರ್ಮಿಕರು ಒಟ್ಟು 100 ಬ್ಯಾಚನ್ನು 15 ದಿನಗಳ ಕಾಲ ಮೈಶುಗರ್ ಕಬ್ಬು ಕಟಾವಿಗೆ ನಿಯೋಜಿಸಿಕೊಡುವಂತೆ ತಿಳಿಸಿದರು.

ಸಭೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷ ಹಾಗೂ ಶಾಸಕ ಎ ಬಿ ರಮೇಶ್ ಬಂಡಿಸಿದ್ದೇಗೌಡ, ಮೈಸೂರು ಸಕ್ಕರೆ ಕಂಪನಿ ನಿಯಮಿತದ ಅಧ್ಯಕ್ಷ ಸಿ ಡಿ ಗಂಗಾಧರ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಕೃಷ್ಣಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!