Monday, May 20, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು| ಎಸ್ಎಸ್ಎಲ್’ಸಿ ಫಲಿತಾಂಶ: ಇಬ್ಬರು ವಿದ್ಯಾರ್ಥಿಗಳ ಆತ್ಮಹತ್ಯೆ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಹಿನ್ನಲೆಯಲ್ಲಿ ಹಾಗೂ ಅನುತ್ತೀರ್ಣವಾದ ಕಾರಣಕ್ಕೆ ಮನ ನೊಂದ ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆ ಶರಣಾಗಿರುವ ದಾರುಣ ಘಟನೆ ವರದಿಯಾಗಿದೆ.

ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದ ಹೆಚ್.ಎಂ.ಅಮೃತ(15) ಎಸ್ ಎಸ್ ಎಲ್ ಸಿ ಪರೀಕ್ಷೆ ತಾನು ನಿರೀಕ್ಷೆ ಮಾಡಿದ್ದಕ್ಕಿಂತ ಕಡಿಮೆ ಅಂಕ ಬಂದಿವೆ ಎಂದು ಮನನೊಂದು ಆತ್ಮಹತ್ಯೆ ಮಗೆ ಶರಣಾದ ವಿದ್ಯಾರ್ಥಿನಿ.

ನಗರಕೆರೆ ಗ್ರಾಮದ ಪೂರ್ಣಿಮಾ ಪ್ರೌಢಶಾಲೆಯಲ್ಲಿ ಓದುತ್ತಿದ್ದ ಅಮೃತ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 353 ಅಂಕಗಳೊಂದಿಗೆ ಶೇ.57ರಷ್ಟು ಫಲಿತಾಂಶ ಪಡೆದು ಉತ್ತೀರ್ಣರಾಗಿದ್ದಳು. ಪರೀಕ್ಷೆಯಲ್ಲಿ ಪಾಸಾಗಿದ್ದರೂ ನಿರೀಕ್ಷಿತ ಅಂಕ ಬಂದಿಲ್ಲವೆಂದು ಮನನೊಂದಿದ್ದ ಅಮೃತ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾಳೆ.ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನೇಣಿಗೆ ಶರಣಾದ ಬಾಲಕ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಕಾರಣಕ್ಕೆ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ತಗ್ಗಹಳ್ಳಿ ಗ್ರಾಮದ ಲಿಖಿತ್ (15) ನೇಣಿಗೆ ಶರಣಾಗಿದ್ದಾನೆ.

ಎಸ್ಸೆಸ್ಸೆಲ್ಸಿ ಫಲಿತಾಂಶ ನೋಡಲು ಶಾಲೆ ಬಳಿ ಹೋಗಿದ್ದ ಲಿಖಿತ್ ಎರಡು ವಿಷಯದಲ್ಲಿ ಅನುತ್ತೀರ್ಣ ಆಗಿದ್ದ ಬಗ ಶಿಕ್ಷಕರು ತಿಳಿಸಿದ್ದರು. ಇದರಿಂದ ಮನನೊಂದ ಆತ ಜಮೀನಿನ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!