Thursday, September 19, 2024

ಪ್ರಾಯೋಗಿಕ ಆವೃತ್ತಿ

ಅವಹೇಳನಕಾರಿ ಕಾಮೆಂಟ್ ಮಾಡಿದ ಸೂಲಿಬೆಲೆ ವಿರುದ್ಧ ದಾಖಲಾಯ್ತು ದೂರು

ಕೆಪಿಸಿಸಿ ಸೋಷಿಯಲ್ ಮೀಡಿಯಾ ಉಪಾಧ್ಯಕ್ಷೆ ಸೌಗಂಧಿಕಾ ರಘುನಾಥ್ ವಿರುದ್ಧ ಅವಹೇಳನಕಾರಿ ಕಾಮೆಂಟ್​ ಮಾಡಿದ ಹಿನ್ನೆಲೆಯಲ್ಲಿ ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ.

ಶಿವಮೊಗ್ಗದಲ್ಲಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ. ನಗರದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಸೂಲಿಬೆಲೆ ವಿರುದ್ಧ ದೂರು ದಾಖಲಿಸಲಾಗಿದೆ.

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದಾರೆ ಎಂದು ಅರೋಪಿಸಿ ಕೆಪಿಸಿಸಿ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್ ಎಂಬುವರು ದೂರು ನೀಡಿದ್ದಾರೆ.

ಚಂದ್ರಯಾನದ ಬಗ್ಗೆ ಪೋಸ್ಟ್​ಗೆ ಸೌಗಂಧಿಕಾ ಕಾಮೆಂಟ್ ಮಾಡಿದ್ದರು. ಇದಕ್ಕೆ ಸೂಲಿಬೆಲೆ, ”ನಿನಗೆ ಯಾಕೆ, ಎಲ್ಲಿ ಉರಿ ಬಂತೋ ಗೊತ್ತಾಗಿಲ್ಲ” ಎಂದು ಚಕ್ರವರ್ತಿ ಸೂಲಿಬೆಲೆ ಕಾಮೆಂಟ್ ಮಾಡಿದ್ದಾರೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಸೌಗಂಧಿಕಾ ದೂರು ನೀಡಿದ್ದಾರೆ.

ಚಂದ್ರಯಾನ 3 ಕುರಿತಾದ ಫೇಸ್ಬುಕ್ ಪೋಸ್ಟ್ ವೇಳೆ ಚಕ್ರವರ್ತಿ ಸೂಲಿಬೆಲೆ ಅವಾಚ್ಯವಾಗಿ ಕಾಮೆಂಟ್ ಮಾಡಿದ್ದಾರೆ ಅಂತ ಸೌಂಗಧಿಕಾ ರಘುನಾಥ್ ದೂರಿದ್ದಾರೆ.

ಫೇಸ್‌ಬುಕ್ ಪೋಸ್ಟ್ ಮತ್ತು ಕಾಮೆಂಟ್ ವಿವರ

ಚಕ್ರವರ್ತಿ ಸೂಲಿಬೆಲೆ ಫೇಸ್‌ಬುಕ್‌ನಲ್ಲಿ, ”ಎಲ್ಲರೂ ದೇವಸ್ಥಾನಗಳಿಗೆ ಹೋಗಿ ಕೈಮುಗಿದು ಚಂದ್ರಯಾನ 3 ಯಶಸ್ವಿಯಾಗಲಿ, ಫೋಟೋಗಳನ್ನು ಹಾಕಿ” ಎಂದು ಪೋಸ್ಟ್ ಮಾಡಿದ್ದರು.

ಇದಕ್ಕೆ ಪ್ರತ್ಯುತ್ತರವಾಗಿ ಸೌಗಂಧಿಕಾ ಅವರು, ”ದೇವಸ್ಥಾನಕ್ಕೆ ಪೂಜೆ ಮಾಡೋದು ತಪ್ಪಲ್ಲ. ಆದರೆ ಫೊಟೋ ಹಾಕಿ ಅಂತ ಹೇಳಿರೋದು ತಪ್ಪು. ವಿಜ್ಞಾನಿಗಳ ಪರಿಶ್ರಮ ಫಲಿಸಲಿ ಎಂದು ಬೇಡಿಕೊಂಡರೆ ಸಾಕು” ಎಂದು ಕಾಮೆಂಟ್ ಮಾಡಿದ್ದರು.

ಆ ಕಾಮೆಂಟ್‌ಗೆ ಚಕ್ರವರ್ತಿ ಸೂಲಿಬೆಲೆ, ”ನಿನಗೆ ಎಲ್ಲಿ ಯಾಕೆ ಉರಿ ಬಂತೋ ಗೊತ್ತಿಲ್ಲ” ಎಂದು ಕೆಟ್ಟ ರೀತಿಯಲ್ಲಿ ಕಾಮೆಂಟ್ ಹಾಕಿದ್ದರು.

ಈ ಕಾರಣಕ್ಕೆ ಫೇಸ್‌ಬುಕ್‌ನಲ್ಲಿ ಅವಾಚ್ಯ ಪದಗಳಿಂದ ಕಾಮೆಂಟ್ ಹಾಕಿದ್ದಾರೆ ಎಂದು ಸೌಗಂಧಿಕಾ ರಘುನಾಥ್  ಆರೋಪಿಸಿದ್ದಾರೆ.

”ಕಾಮೆಂಟ್ ಹಾಕಿದ ಬಳಿಕ ಸಾಕಷ್ಟು ಫೇಕ್ ಅಕೌಂಟ್‌ಗಳಿಂದ ನನ್ನ ತೇಜೋವಧೆಗೆ ಪ್ರಯತ್ನ ನಡೆದಿದೆ, ಆದರೆ ನಾನು ಯಾವುದಕ್ಕೂ ಸೊಪ್ಪು ಹಾಕೋದಿಲ್ಲ” ಎಂದು ಸೌಗಂಧಿಕಾ ರಘುನಾಥ್ ಪ್ರತಿಕ್ರಿಯಿಸಿದ್ದಾರೆ.

Related Articles

2 COMMENTS

  1. Regarding the case on Mr. Chakravarthi Sulibele , is really a good move. He always talks in favour of one particular community and party. And always tries to insult other communities and religion . Even in debates he used to insult other perticipants through his mean wards and bad mannerism. And most of our ankers are also bias and supporting him . He is always tries to emphasis his religion and party is superior and others r no value. So atleast now he can correct himself. Being an educated and intellegent person ,we the viewers never expect this bad behaviour from him. I do appreciate him for his indepth knowledge and vocabulary but always feels sad about the negetive part of his personality. Hope in futur he will change this negetive personality and use his positive personality for the betterment of the society. May god bless him.

  2. I condemn the inappropriate attempt to implicate chakravarti by these ignorant people. Mr Sulibele is an astute speaker and an erudite public personality… and you try to touch him the entire youth of Karnataka wii standby him… Be warned…

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!