ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಂತರ ಗೆದ್ದು ಬಿಜೆಪಿಗೆ ಬೆಂಬಲ ನೀಡಿದ್ದ ಸುಮಲತಾ ಅವರಿಗೆ 2024 ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕಾರಣದಿಂದ ಬಿಜೆಪಿ ಟಿಕೆಟ್ ನೀಡಲು ಸಾಧ್ಯವಾಗಿರಲಿಲ್ಲ.

ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿ-ಜೆಡಿಎಸ್ ಮೈತ್ರಿ ಕಾರಣದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬಿಟ್ಟು ಕೊಟ್ಟ ಕಾರಣಕ್ಕೆ ಸುಮಲತಾ ಅವರಿಗೆ ಎಂಎಲ್ಸಿ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ಮುಂದಾಗಿದ್ದು, ಅವರಿಗೆ ಎಂಎಲ್ಸಿ ಸ್ಥಾನ ಖಚಿತವೆಂದು ದೆಹಲಿ ಮೂಲಗಳು ಸ್ಪಷ್ಟ ಪಡಿಸಿವೆ.




