ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಪುಟ್ಟಣ್ಣಯ್ಯ ಅವರು ಜಯಗಳಿಸಿರುವ ಹಿನ್ನಲೆಯಲ್ಲಿ ಮಂಡ್ಯ ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಸುನೀತಾ ಪುಟ್ಟಣ್ಣಯ್ಯ ಅಭಿಮಾನಿ ಗೆಳತಿಯರ ಬಳಗದಿಂದ ಗ್ರಾಮದ ಆದಿದೇವತೆ ಶ್ರೀ ದೊಡ್ಡಮ್ಮತಾಯಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಹರಕೆ ತೀರಿಸಲಾಯಿತು.
ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಲಿಂಗರಾಜಮ್ಮ ಮಾತನಾಡಿ, ಚುನಾವಣೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ ಅವರು ಜಗಳಿಸಲೆಂದು ಹರಕೆ ಕಟ್ಟಿಕೊಳ್ಳಲಾಗಿತ್ತು. ಜಯಗಳಿಸಿದ ಕಾರಣ ಈ ದಿನ ವಿಶೇಷ ಪೂಜೆ ಸಲ್ಲಿಸಿ ಹರಕೆ ತೀರಿಸುತ್ತಿದ್ದೇವೆ. ದರ್ಶನ್ ಪುಟ್ಟಣ್ಣಯ್ಯ ಅವರು ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡಿಕೊಂಡು ಬರಬೇಕು. ಆ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸುನೀತಾ ಪುಟ್ಟಣ್ಣಯ್ಯ ಅವರು, ನಿಮ್ಮ ಪ್ರೀತಿಗೆ ಸದಾ ಋಣಿಯಾಗಿರುತ್ತೇನೆ, ದರ್ಶನ್ ನಿಮ್ಮ ಮನೆ ಮಗ, ಅವರು ನೀವು ಮೆಚ್ಚುವಂತೆಯೇ ಮೇಲುಕೋಟೆ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎಲ್.ಅಭಿನಂದನ್, ಸುನೀತಾ ಪುಟ್ಟಣ್ಣಯ್ಯ ಗೆಳತಿಯರ ಬಳಗದ ಪದಾಧಿಕರಿಗಳಾದ ವಿನೂತ, ಪದ್ಮಾ, ಶಾಂತಮ್ಮ, ಪದ್ಮಮ್ಮ, ರೈತ ಯುವ ಮುಖಂಡರಾದ ನಂದೀಶ್, ಚೇತನ್, ಯಶ್ವಂತ್, ನಿಂಗೇಗೌಡ, ಸೂರಿ, ರೇವಣ್ಣ ಸೇರಿದಂತೆ ಮಹಿಳಾ ಸಂಘದ ಪದಾಧಿಕಾರಿಗಳು ದರ್ಶನ್ ಪುಟ್ಟಣ್ಣಯ್ಯ ಅಭಿಮಾನಿಗಳು ಭಾಗವಹಿಸಿದ್ದರು.




