Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕಾವೇರಿ ಹೋರಾಟಕ್ಕೆ ಕೀಲಾರ ಗ್ರಾಮಸ್ಥರ ಬೆಂಬಲ

ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ನಿರಂತರ ಧರಣಿ 52ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕೀಲಾರ ಗ್ರಾಮಸ್ಥರು ಕಾವೇರಿ ಹೋರಾಟ ಬೆಂಬಲಿಸಿದರು.

ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮುಖಂಡರ ಜೊತೆಗೂಡಿ ರಸ್ತೆ ತಡೆ ನಡೆಸಿದ ಗ್ರಾಮಸ್ಥರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋ

ಟ್ರ್ಯಾಕ್ಟರ್ ಗಳ ಸಮೇತ ಮೆರವಣಿಗೆ ಹೊರಟು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಧರಣಿ ಸ್ಥಳಕ್ಕೆ ತೆರಳಿ ನಿರಂತರ ಧರಣಿಯಲ್ಲಿ ಭಾಗಿಯಾದರು. ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಹಾಗೂ ಪ್ರಾಧಿಕಾರ ತಾರತಮ್ಯ ಧೋರಣೆ ಮಾಡುತ್ತಿದೆ, ಜಲಾಶಯಗಳಲ್ಲಿನ ನೀರಿನ ಲಭ್ಯತೆ ಬಗ್ಗೆ ಪರಿಶೀಲಿಸದೆ ನೀರು ಬಿಡುವ ಆದೇಶ ಮಾಡುತ್ತಿರುವುದು ಕರ್ನಾಟಕಕ್ಕೆ ಅನ್ಯಾಯ ಮಾಡಿದಂತಾಗಿದೆ ಎಂದು ಆರೋಪಿಸಿದರು.

ಮುಖಂಡರಾದ ಕಿಲಾರ ಕೃಷ್ಣ,ಕೆ.ಟಿ ಚಂದ್ರು,ಸೋಮಶೇಖರ್, ಕೆ.ಎಸ್ ರಮೇಶ್,ಕೆ,ಚಂದ್ರಶೇಖರ್ ನೇತೃತ್ವ ವಹಿಸಿದ್ದರು.ಕಾವೇರಿ ಕುಟುಂಬದ ಮುಖ್ಯಸ್ಥ ಡಾ.ಕೆ ಸಿ ಬಸವರಾಜ್, ಸಮಿತಿಯ ಸುನಂದ ಜಯರಾಂ, ಕೆ.ಬೋರಯ್ಯ, ರೈತ ಸಂಘದ ಇಂಡುವಾಳು ಚಂದ್ರಶೇಖರ್, ಮುದ್ದೇಗೌಡ, ಕನ್ನಡ ಸೇನೆ ಮಂಜುನಾಥ್, ದಸಂಸ ಎಂ ವಿ ಕೃಷ್ಣ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ