Friday, June 21, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ‘ಕೈ’ ಅಭ್ಯರ್ಥಿ ಸ್ಟಾರ್ ಚಂದ್ರುಗೆ ‘ಕರ್ನಾಟಕ ಜನಶಕ್ತಿ’ ಬೆಂಬಲ

ಮಂಡ್ಯ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಕರ್ನಾಟಕ ಜನಶಕ್ತಿ ಸಂಘಟನೆ ಹಾಗೂ ಅದರ ಅಂಗ ಸಂಘಟನೆಗಳು ಷರತ್ತುಬದ್ದ ಬೆಂಬಲ ಘೋಷಿಸಿದೆ ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸಿದ್ದರಾಜು ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.26ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಜನಶಕ್ತಿ, ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟ, ಮಹಿಳಾ ಮುನ್ನಡೆ ಸೇರಿದಂತೆ ಹಲವಾರು ಸಂಘಟನೆಗಳು ಷರತ್ತುಬದ್ದವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿವೆ ಎಂದರು.

ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಪೂರ್ಣಿಮ ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಅಧಿಕಾರ ನಡೆಸುತ್ತಿರುವ ಬಿಜೆಪಿ, ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡಿಲ್ಲ. ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದ್ದರೂ ಇದನ್ನು ತಡೆಗಟ್ಟುವಲ್ಲಿ ವಿಫಲವಾಗಿದೆ. ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನವಿರೋಧಿ ಕಾನೂನುಗಳನ್ನು ಜಾರಿ ಮಾಡಿದೆ ಎಂದು ದೂರಿದರು.

ಬಿಜೆಪಿಯ ಅವಧಿಯಲ್ಲಿ ಭ್ರಷ್ಟಾಚಾರ, ಮೋಸ, ವಂಚನೆ, ಕೊಲೆ ಪ್ರಕರಣಗಳು ಜರುಗಿದ್ದು,ಹಾಗಾಗಿ ಜನರ ರಕ್ಷಣೆಗೆ ಮುಂದಾಗದ, ರೈತ, ಕಾರ್ಮಿಕ ,ಜನವಿರೋಧಿ ನೀತಿ ಅನುಸರಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷವನ್ನು ಸೋಲಿಸಲು ಕಾಂಗ್ರೆಸ್ ಪಕ್ಷಕ್ಕೆ ಷರತ್ತಿನ ಬದ್ಧವಾಗಿ ಬೆಂಬಲ ನೀಡುತ್ತಿದ್ದು, ಮತದಾರರು ಸಹ ಬೆಂಬಲಿಸಬೇಕೆಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಕರ್ನಾಟಕ ಜನಶಕ್ತಿಯ ಜಗದೀಶ್ ನಗರಕೆರೆ, ಶ್ರಮಿಕ ಶಕ್ತಿ ಸಂಘಟನೆಯ ಕೃಷ್ಣ, ಮಹಿಳಾ ಮುನ್ನಡೆ ಸಂಘಟನೆಯ ಶಿಲ್ಪಾ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!