Friday, June 21, 2024

ಪ್ರಾಯೋಗಿಕ ಆವೃತ್ತಿ

ಕಾವೇರಿ ಸಮಸ್ಯೆ ಪರಿಹಾರಕ್ಕೆ ಕುಮಾರಸ್ವಾಮಿ ಬೆಂಬಲಿಸಿ: ನಿಖಿಲ್

ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು, ಜನತಾದರ್ಶನ, ಗ್ರಾಮವಾಸ್ತವ್ಯ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡಿದ್ದರು. ಕಾವೇರಿ ನೀರಿನ ಶಾಶ್ವತ ಪರಿಹಾರಕ್ಕೆ ಹಾಗೂ ರಾಜ್ಯದ ಅಭಿವೃದ್ದಿಗೆ ಅವರಿಗೆ ಹೆಚ್ಚು ಮತವನ್ನು ನೀಡಿ ಗೆಲ್ಲಿಸಬೇಕೆಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.

ಮಳವಳ್ಳಿ ಪಟ್ಟಣದ ಪುರಸಭೆ ವ್ಯಾಪ್ತಿಯ ವಾರ್ಡ್ ಗಳಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಹೆಚ್‌.ಡಿ ಕುಮಾರಸ್ವಾಮಿ ಪರ ಮತಯಾಚನೆ ಮಾಡಿ ನೀಡಿದರು.

ಪ್ರಧಾನಿ ನರೇಂದ್ರಮೋದಿ ಅವರು 10 ವರ್ಷದಿಂದ ದೇಶವನ್ನು ಕಟ್ಟಲು ಶ್ರಮಿಸುತ್ತಿದ್ದಾರೆ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಲಾಟರಿ ಮತ್ತು ಸಾರಾಯಿಯನ್ನು ನಿಷೇಧ ಮಾಡುವುದರ ಮೂಲಕ ಗ್ರಾಮೀಣ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದರು, ಶಾಶ್ವತವಾಗಿ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಬೇಕಾದರೇ ಕೇಂದ್ರದಲ್ಲಿ ಮೋದಿ ಅಧಿಕಾರಕ್ಕೆ ಬರಬೇಕೆಂದರು.

ಮಾಜಿ ಶಾಸಕ ಡಾ. ಕೆ.ಅನ್ನದಾನಿ ಮಾತನಾಡಿ, ಹೆಚ್‌ಡಿ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡಿದ್ದರಿಂದ ಸಾವಿರಾರು ರೈತ ಕುಟುಂಬಗಳು ನೆಮ್ಮದಿಯಿಂದ ಬದುಕಿವೆ, ಮಂಡ್ಯ ಜಿಲ್ಲೆಯ ಅಭಿವೃದ್ದಿಗಾಗಿ ಕಾವೇರಿ ನೀರಿನ ಸಮಸ್ಯೆಯನ್ನು ಶಾಸ್ವತವಾಗಿ ಬಗೆಹರಿಸಲು ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಮತಗಳನ್ನು ಕೊಟ್ಟು ಜಯಶೀಲರನ್ನಾಗಿ ಮಾಡಬೇಕೆಂದು ಕೋರಿದರು.

ಇದೇ ಸಂದರ್ಭದಲ್ಲಿ ಯುವ ಘಟಕ ಜಿಲ್ಲಾಧ್ಯಕ್ಷ ರವಿಕಂಸಾಗರ, ತಾಲ್ಲೂಕು ಅಧ್ಯಕ್ಷ ವಿಶ್ವನಾಥ್, ಬಿಜೆಪಿ ಮುಖಂಡರಾದ ಮುನಿರಾಜು, ಬಿಜೆಪಿ ಅಧ್ಯಕ್ಷ ಕೃಷ್ಣ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!