Friday, June 21, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಅಭಿವೃದ್ದಿಗಾಗಿ ಕುಮಾರಸ್ವಾಮಿ ಬೆಂಬಲಿಸಿ: ಅನ್ನದಾನಿ

ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು, ರೈತರ ಸಾಲ ಮನ್ನಾ ಮಾಡಿ ರೈತಪರ ನಿಲುವು ತಾಳಿದ್ದರು, ಹಾಗಾಗಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂದು ಮಾಜಿ ಶಾಸಕ ಡಾ. ಕೆ ಅನ್ನದಾನಿ ಮನವಿ ಮಾಡಿದ್ದರು.

ಮಳವಳ್ಳಿ ತಾಲ್ಲೂಕಿನ ಅಂಚೇದೊಡ್ಡಿ, ನಿಡಘಟ್ಟ, ಹಿಟ್ಟನಹಳ್ಳಿ ಸೇರಿದಂತೆ ವಿವಿಧ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಹೆಚ್‌.ಡಿ ಕುಮಾರಸ್ವಾಮಿ ಪರ ಮತಯಾಚನೆ ಮಾಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಅಭಿವೃದ್ದಿಗೆ ಭಾಗಲಕ್ಷ್ಮಿಯಂತೆ ಹೆಚ್‌ಡಿ ಕುಮಾರಸ್ವಾಮಿ ಅವರೇ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ, ನಾವೇನಿದ್ದರೂ ಅವರನ್ನು ಮತಹಾಕಿ ಗೆಲ್ಲಿಸುವುದರ ಮೂಲಕ ಬರಮಾಡಿಕೊಳ್ಳಬೇಕಷ್ಟೆ ಎಂದರು.

ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಿ ಪ್ರಧಾನಿ ನರೇಂದ್ರಮೋದಿಯವರ ಸಚಿವ ಸಂಪುಟದಲ್ಲಿ ಎಚ್‌ಡಿ ಕುಮಾರಸ್ವಾಮಿ ಕೃಷಿ ಸಚಿವರಾಗಿ ಮಂಡ್ಯ ಜಿಲ್ಲೆಯಲ್ಲಿನ ಕಾವೇರಿ ನೀರಿನ ಸಮಸ್ಯೆಯನ್ನು ಬಗೆಹರಿಸುವುದಲ್ಲದೇ ಮೇಕೆದಾಟು ಯೋಜನೆಗೆ ಚಾಲನೆ ನೀಡಲಿದ್ದಾರೆಂದು ಎಂದರು.

ಜೆಡಿಎಸ್ ಯುವ ಘಟಕ ಜಿಲ್ಲಾಧ್ಯಕ್ಷ ರವಿ ಕಂಸಾಗರ ಮಾತನಾಡಿ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದು, ಹೆಚ್ಚಿನ ಮತಗಳನ್ನು ಕೊಟ್ಟು ಲೋಕಸಭೆಗೆ ಕಳುಹಿಸುವ ಜವಾಬ್ದಾರಿ ನಮ್ಮೆಲ್ಲರದಾಗಿದೆ, ಬಡವರ ಸಮಸ್ಯೆಗಳನ್ನು ಹತ್ತಿರದಿಂದ ಕಂಡಿರುವ ಮಾಜಿ ಮುಖ್ಯಮಂತ್ರಿಗಳು ಕೇಂದ್ರದಿಂದ ಜಿಲ್ಲೆಗೆ ಬೇಕಾದ ಸೌಲಭ್ಯಗಳನ್ನು ಕೊಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದಾರೆಂದರು.

ಜೆಡಿಎಸ್ ತಾಲ್ಲೂಕು ಅಧ್ಯಕ್ಷ ವಿಶ್ವನಾಥ್ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!