Thursday, September 19, 2024

ಪ್ರಾಯೋಗಿಕ ಆವೃತ್ತಿ

ಬೆಲೆ ಕುಸಿತ : ಸರ್ಕಾರದಿಂದ ಕಚ್ಚಾ ರೇಷ್ಮೆ ಖರೀದಿಗೆ ಸಚಿವರ ಸೂಚನೆ

ಕಚ್ಚಾ ರೇಷ್ಮೆ ಬೆಲೆ ದಿಢೀರ್ ಕುಸಿತದಿಂದ ಕಂಗಲಾಗಿರುವ ರೇಷ್ಮೆ ಬೆಳೆಗಾರರ ಬೆಂಬಲಕ್ಕೆ ಧಾವಿಸಿದ್ದು, ಸರ್ಕಾರದಿಂದಲೇ ಕಚ್ಚಾ ರೇಷ್ಮೆ ಖರೀದಿಸುವಂತೆ ರೇಷ್ಮೆ ಹಾಗೂ ಯುವ ಸಬಲೀಕರಣ ಸಚಿವ ನಾರಾಯಣಗೌಡ  ಸೂಚಿಸಿದರು.

ಕೆ.ಆರ್.ಪೇಟೆ ಪಟ್ಟಣದ ಮಿನಿ ವಿಧಾನಸೌಧದಲ್ಲಿ ರೇಷ್ಮೆ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಅವರು ಮಾತನಾಡಿದರು.

ಕಳೆದ ಎರಡು ವರ್ಷಗಳಿಂದ ಸ್ಥಿರವಾಗಿದ್ದ ರೇಷ್ಮೆಗೂಡಿನ ದರ ದಿಢೀರ್ ಕುಸಿತಕ್ಕೆ ಕಾರಣ ಏನು ಎಂಬುದರ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಕಚ್ಛಾ ರೇಷ್ಮೆಗೂಡಿನ ದರ ದಿಢೀರ್‌ ಕುಸಿತದಿಂದ ಯಾವುದೇ ಕಾರಣಕ್ಕೂ ರೈತರಿಗೆ ಸಮಸ್ಯೆ ಆಗಬಾರದು. ಕೂಡಲೇ ಸರ್ಕಾರ ಮಧ್ಯೆ ಪ್ರವೇಶ ಮಾಡಿ, ರೇಷ್ಮೆ ಬೆಳೆಗಾರರ ಜೊತೆ ನಿಲ್ಲಬೇಕು. ಕೆಎಸ್‌ಎಂಬಿ ಮುಖಾಂತರ ಕಚ್ಚಾ ರೇಷ್ಮೆ ಖರೀದಿ ಮಾಡಬೇಕೆಂದು ಸೂಚಿಸಿದರು.

ಇಂದು ಸಂಜೆಯೇ ದರ ಕಮಿಟಿಯ ಸಭೆ ಕರೆದು, ನಾಳೆಯಿಂದಲೇ ಕೆಎಸ್‌ಎಂಬಿ ಮೂಲಕ ಕಚ್ಚಾ ರೇಷ್ಮೆ ಖರೀದಿಗೆ ಚಾಲನೆ ನೀಡಬೇಕು. ರೇಷ್ಮೆ ಗೂಡಿನ ದರ ಮತ್ತೆ ಉತ್ತಮ ಸ್ಥಿತಿಗೆ ತಲುಪಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ. ಇದೇ ವೇಳೆ ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಭಾಗದಲ್ಲಿ ರೇಷ್ಮೆ ಹುಳು ಹಣ್ಣಾಗುತ್ತಿಲ್ಲದರ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಶಿಡ್ಲಘಟ್ಟ ಭಾಗದಲ್ಲಿ 15 ದಿನ ಕಳೆದರೂ ರೇಷ್ಮೆ ಹುಳುಗಳು ಹಣ್ಣಾಗುತ್ತಿಲ್ಲ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ, ಕೂಡಲೇ ರೇಷ್ಮೆ ಇಲಾಖೆಯ ವಿಜ್ಞಾನಿಗಳು ಭೇಟಿ ನೀಡಿ ನಿಖರ ಕಾರಣದ ಬಗ್ಗೆ ವರದಿ ನೀಡಬೇಕು ಹಾಗೂ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದೇನೆ ವಿವರಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!