ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿ ವರ್ಗಕ್ಕೆ ಮೀಸಲಾತಿ ನೀಡಿರುವುದು ಸರಿ ಎಂದಿರುವ ಸುಪ್ರೀಂ ಕೋರ್ಟ್ ತೀರ್ಪು ಸರಿಯಿಲ್ಲ ಎಂದು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ನಾಗಮೋಹನ ದಾಸ್ ಅಭಿಪ್ರಾಯ ವ್ಯಕ್ತಪಡಿಸಿದರು.
ಬಹುಮತದ ತೀರ್ಪು ಸಂವಿಧಾನದ ಆಶಯಗಳಿಗೆ ವಿರುದ್ಧವಾದುದು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದು, ಶೋಷಣೆಗೆ ಒಳಪಟ್ಟಿರುವ ಜನ ವರ್ಗಕ್ಕೆ ಮೀಸಲಾತಿ ಕೊಡಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಆದರೆ, ಆರ್ಥಿಕ ಮಾನದಂಡದ ಮೇಲೆ ಮೀಸಲಾತಿ ನೀಡಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾದುದು. ಅಂಥ ಮೀಸಲಾತಿ ಎತ್ತಿ ಹಿಡಿದಿರುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.




