Thursday, November 19, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ | ಮನನೊಂದು ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣು

ಸಾಂಸಾರಿಕ ಕಲಹದಿಂದ ಮನನೊಂದು ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ಜರುಗಿದೆ.

ದಂಪತಿಗಳ ನಡುವಿನ ಕಲಹದಿಂದ ಬೇಸತ್ತು ಪತಿ ಕೆಲಸಕ್ಕೆ ತೆರಳಿದಾಗ ಪತ್ನಿ 32 ವರ್ಷದ ವಿದ್ಯಾ ಗುರುವಾರ ಸಂಜೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಷಯ ತಿಳಿದು ಮನೆಗೆ ಬಂದ ಪತಿ 46 ವರ್ಷದ ಪುರುಷೋತ್ತಮ ಅವರು ಮನೆ ಪಕ್ಕದ ಜಮೀನಿಗೆ ತೆರಳಿ ನೇಣಿಗೆ ಶರಣಾಗಿದ್ದಾರೆ.

ಪುರುಷೋತ್ತಮ್ ಮೈಸೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.

ಮೃತ ದಂಪತಿಗೆ ಇಬ್ಬರು ಪುಟ್ಟ ಮಕ್ಕಳಿದ್ದು 2 ಹಾಗೂ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಶವಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ