Friday, September 20, 2024

ಪ್ರಾಯೋಗಿಕ ಆವೃತ್ತಿ

ಬಾಲಕಿಯ ಅನುಮಾಸ್ಪದ ಸಾವು..?

ನಿರ್ಮಾಣ ಹಂತದ ಮನೆಯ ಮುಂಭಾಗದ ನೀರಿನ ಸಂಪ್ ನಲ್ಲಿ ಬಾಲಕಿಯ ಶವ ಪತ್ತೆಯಾಗಿದ್ದು, ಇದ ಆಕಸ್ಮಿಕವೋ ಇಲ್ಲಾ, ಕೊಲೆಯೋ ಎಂಬುದು ಅನುಮಾನ ಮೂಡಿಸಿದೆ.

ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದ ನೀರಿನ ಸಂಪ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಬಾಲಕಿಯೊಬ್ಬಳ ಶವ ಪತ್ತೆಯಾಗಿದೆ. ಪಟ್ಟಣದ ಎನ್ಇಎಸ್ ಬಡಾವಣೆಯ ಅಶ್ವಿನಿ ಮತ್ತು ಸುರೇಶ್ ಕುಮಾರ್ ಎಂಬ ದಂಪತಿಯ ಪುತ್ರಿ ದಿವ್ಯಾ(10) ಶವವಾಗಿ ಪತ್ತೆಯಾಗಿರುವ ಬಾಲಕಿ.‌

ಬೆಳಿಗ್ಗೆ 11 ಗಂಟೆಗೆ ಟ್ಯೂಶನ್ ಗೆ ಎಂದು ಮನೆಯಿಂದ ಹೋದ ಬಾಲಕಿ ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಗಾಬರಿಯಾದ ಪೋಷಕರು ಟ್ಯೂಶನ್ ಸೆಂಟರ್ ಸೇರಿದಂತೆ ಅಕ್ಕಪಕ್ಕದಲ್ಲಿ ವಿಚಾರಿಸಿದರೂ ಬಾಲಕಿ ಪತ್ತೆಯಾಗಿಲ್ಲ.

ಕೊನೆಗೆ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗ ನಾಗರಾಜು ಎಂಬುವವರ ನಿರ್ಮಾಣ ಹಂತದ ಮನೆಯ ಕಟ್ಟಡದ ಸಮೀಪದಲ್ಲಿದ್ದ ಯಾರೋ ಒಬ್ಬರು ಬಾಲಕಿ ನೀರಿನ ಸಂಪ್ ನಲ್ಲಿ ಬಿದ್ದಿರುವ ಬಗ್ಗೆ ನೀಡಿದ ಮಾಹಿತಿ ಮೇರೆಗೆ ನೀರಿನ ಸಂಪ್ ನಲ್ಲಿ ಪರಿಶೀಲನೆ ನಡೆಸಿದಾಗ ಬಾಲಕಿ ದಿವ್ಯಳ ಶವ ಪತ್ತೆಯಾಗಿದೆ.

ಬಾಲಕಿ ಸಾವಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದ್ದು, ಸ್ಥಳಕ್ಕೆ ಡಿವೈಎಸ್ ಪಿ‌.ಎನ್.ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಶ್ವಾನದಳದೊಂದಿಗೆ ಪರಿಶೀಲನೆ ನಡೆಸಿದರು. ಬಾಲಕಿಯ ಶವವನ್ನು ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿ ಬಂದ ನಂತರ ಈ ಸಾವಿನ ನಿಖರ ಕಾರಣ ತಿಳಿದು ಬರಲಿದೆ. ಈ‌‌ ಸಂಬಂಧ ಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರಿರು ತನಿಖೆ ಕೈಗೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!