Tuesday, November 24, 2026

ಪ್ರಾಯೋಗಿಕ ಆವೃತ್ತಿ

ಸುತ್ತೂರು ಮಠ ಬಡವರ ಕಲ್ಯಾಣಕ್ಕಾಗಿ ಶ್ರಮಿಸಿದೆ : ಚಲುವರಾಯಸ್ವಾಮಿ

ಸುತ್ತೂರು ಮಠವು ನಿರಂತರವಾಗಿ ಶಿಕ್ಷಣಕ್ಕೆ ಮಾನ್ಯತೆ ಕೊಟ್ಟಿದೆ. ಸರ್ಕಾರ ಬಡವರ ಹಿತಕ್ಕಾಗಿ ಕಾರ್ಯಕ್ರಮ ಕೊಡುತ್ತೋ ಅದೇ ರೀತಿ ಮಠ ವಿಶೇಷ ಕಾರ್ಯಕ್ರಮ ನೀಡಿದ್ದು, ಬಡವರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮ ನೀಡಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಮಳವಳ್ಳಿಯಲ್ಲಿ ಆದಿ ಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳವರ 1066 ನೇಮ ಜಯಂತಿ ಮಹೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಈ ಸಮಾರಂಭವು ರಾಷ್ಟ್ರಪತಿಯವರ ನೇತೃತ್ವದಲ್ಲಿ ನಡೆದಿದ್ದು, ಸುತ್ತೂರು ಕ್ಷೇತ್ರ ನಾಡಿನ ಜನರ ಕಲ್ಯಾಣಕ್ಕೆ ಮೂಡಿಪಿಟ್ಟಿದೆ. ಜನರ ಸೇವೆ ಮಾಡುವುದೇ ಈ ಮಠದ ಅತ್ಯಂತ ಪ್ರಮುಖ ಕಾರ್ಯವಾಗಿದೆ.
ವಿಭಿನ್ನ ರೀತಿಯಲ್ಲಿ ರಾಜ್ಯದ ಅಭಿವೃದ್ಧಿ, ಜನಪರ ಕಾರ್ಯಕ್ರಮ ಜಾರಿ ಮಾಡಿದೆ. ಸುತ್ತೂರು ಕ್ಷೇತ್ರದ ಬಗ್ಗೆ ಅಭಿಮಾನ ಇಟ್ಟು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಸಹಕಾರ ಕೊಟ್ಟಿದ್ದಾರೆ.ಸುತ್ತೂರು ಕ್ಷೇತ್ರದ ಒಂದು ಸಾಧನೆ ಚರಿತ್ರೆಯಲ್ಲಿ ಉಳಿಯುತ್ತದೆ ಎಂದರು.

ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜಕಲ್ಯಾಣ ಸಚಿವ ಹೆಚ್ ಸಿ ಮಹಾದೇವಪ್ಪ, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ ಎನ್ ನರೇಂದ್ರಸ್ವಾಮಿ, ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಶಾಸಕರಾದ ರವಿಕುಮಾರ್ ಗಣಿಗ, ಕೆ ಎಂ ಉದಯ್, ಮಧು ಮಾದೇಗೌಡ, ಡಾ. ಯತೀಂದ್ರ ಸಿದ್ದರಾಮಯ್ಯ ಚೆಸ್ಕಾಂ ಅಧ್ಯಕ್ಷ ರಮೇಶ್ ಬಾಬು ಬಂಡಿಸಿದ್ದೇಗೌಡ, ವಿಜಯಲಕ್ಷ್ಮಿ ರಘುನಂದನ್ ಹಾಗೂ  ಮರಿತಿಬ್ಬೇಗೌಡ ಇನ್ನಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ