Thursday, September 19, 2024

ಪ್ರಾಯೋಗಿಕ ಆವೃತ್ತಿ

ಸ್ವಾಮಿ ವಿವೇಕಾನಂದ ಸ್ವ ಸಹಾಯಕ ಸಂಘಗಳ ಸ್ಥಾಪನೆ : ಸಚಿವ ನಾರಾಯಣಗೌಡ

ಯುವಕರಿಗೆ ಉತ್ತಮವಾದ ದಾರಿ ಕಲ್ಪಿಸಿ, ಉತ್ತಮವಾದ ಭವಿಷ್ಯವನ್ನು ಕಟ್ಟಿಕೊಳ್ಳುವ ಉದ್ದೇಶದಿಂದ ಸ್ವಾಮಿ ವಿವೇಕಾನಂದ ಸ್ವ ಸಹಾಯಕ ಸಂಘಗಳನ್ನು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ರೇಷ್ಮೆ ಮತ್ತು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಕೆ.ಸಿ ನಾರಾಯಣಗೌಡ ತಿಳಿಸಿದರು.

ಮಂಡ್ಯನಗರದ ಕಲಾಮಂದಿರದಲ್ಲಿ ಗುರುವಾರ ನಡೆದ ಯುವ ಜನೋತ್ಸವ ಕಾರ್ಯಕ್ರಮವನ್ನು ‌ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಯುವಕರ ಸಬಲೀಕರಣಕ್ಕಾಗಿ ಎರಡು ಯುವ ಸಂಘಗಳನ್ನು ಸ್ವಾಮಿ ವಿವೇಕಾನಂದ ಸ್ವಸಹಾಯ ಯೋಜನೆಯಡಿ ರಚಿಸಲು‌ ಉದ್ದೇಶಿಸಲಾಗಿದೆ,  ನೋಂದಣಿ ಯಾದ ಸಂಘಕ್ಕೆ 10,000 ರೂ. ಸಹಾಯಧನ‌ವನ್ನು ಸರ್ಕಾರದಿಂದ ನೀಡಲಾಗುವುದು. ಬ್ಯಾಂಕಿನಿಂದಲೂ ಸ್ವ ಉದ್ಯೋಗ ಹಾಗೂ ಇನ್ನಿತರ ಚಟುವಟಿಕೆಗಳಿಗೆ ಸಾಲ ಲಭ್ಯವಾಗುತ್ತದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲ ಕೃಷ್ಣ ಮಾತನಾಡಿ, ಮಂಡ್ಯ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಬರುವ ಮುನ್ನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತನಾಗಿ ಒಂದು ವರ್ಷಗಳ ಕಾಲ ಮುಖ್ಯಮಂತ್ರಿಗಳ ಹಾಗೂ ಯುವ ಸಬಲೀಕರಣ ಸಚಿವರ ಮಾರ್ಗದರ್ಶನದಲ್ಲಿ ಉತ್ತಮವಾಗಿ ಕೆಲಸ ಮಾಡಲು ಸಾಧ್ಯವಾಯಿತು ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತನಾಗಿ ಯುವ ಜನರ ಚಟುವಟಿಕೆಗಳನ್ನು ಬಹಳ ಹತ್ತಿರದಿಂದ ನೋಡಲು ಸಾಧ್ಯವಾಯಿತು. ಹಾಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಿಗೆ ವೈಯಕ್ತಿಕವಾಗಿ ಅಭಿನಂದನೆಯನ್ನು ಸಲ್ಲಿಸುತ್ತೇನೆ. ರಾಜ್ಯ ಮಟ್ಟದ ಯುವಜನೋತ್ಸವ, ಖೇಲೋ ಇಂಡಿಯಾ ಕಾರ್ಯಕ್ರಮ, ಮಿನಿ ಒಲಿಂಪಿಕ್ಸ್ ಹಾಗೂ ಇನ್ನಿತರ ಉತ್ತಮ ಕಾರ್ಯಕ್ರಮಗಳನ್ನು ನಡೆಸಿ ಸಚಿವರ ಸಹಕಾರದಿಂದ ಸಾಧನೆ ಮಾಡಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿ.ಪಂ.ಸಿ.ಇ.ಓ. ಶಾಂತ ಎಲ್ ಹುಲ್ಮನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಮೂಡ ಅಧ್ಯಕ್ಷ ಕೆ.ಶ್ರೀನಿವಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಓಂಪ್ರಕಾಶ್, ಯುವ ಪ್ರಶಸ್ತಿ ಪುರಸ್ಕೃತರಾದ ನಾಗರಾಜು, ಮಾದಾಪುರದ ಸೋಮಶೇಖರ್, ಕುಮಾರ್ ಕೊಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!