Thursday, September 19, 2024

ಪ್ರಾಯೋಗಿಕ ಆವೃತ್ತಿ

ಸ್ವಾಮಿ ವಿವೇಕಾನಂದರ ತತ್ವಾದರ್ಶ ಅಳವಡಿಸಿಕೊಳ್ಳಿ: ಎಸ್.ಡಿ. ಬೆನ್ನೂರ

ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್. ಡಿ. ಬೆನ್ನೂರ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಶ್ರೀರಂಗಪಟ್ಟಣದ ಸರ್ಕಾರಿ ತರಬೇತಿ ಸಂಸ್ಥೆ (ಐ ಟಿ ಐ ) ಕಾಲೇಜಿನಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಸಾರ್ವಜನಿಕ ಆಸ್ಪತ್ರೆ ಶ್ರೀರಂಗಪಟ್ಟಣ ಇವರುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಭಾರತದ ಶ್ರೇಷ್ಠ ನಾಯಕ ಮತ್ತು ಯುವಜನ ಶಕ್ತಿಯಲ್ಲಿ ಅಪಾರ ನಂಬಿಕೆಯುಳ್ಳ ಮಹಾನ್ ವ್ಯಕ್ತಿ ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಅವರ ಗೌರವಿಸಲು ಪ್ರತಿ ವರ್ಷ ಜನವರಿ 12 ರಂದು ರಾಷ್ಟ್ರೀಯ ಯುವ ದಿನ ವನ್ನು ಆಚರಿಸಲಾಗುತ್ತಿದೆ.ಯುವ ಶಕ್ತಿ ದೇಶದ ಶಕ್ತಿ.

nudikarnataka.com

ಇಂದಿನ ಯುವಜನತೆ ಆರೋಗ್ಯ ಬಹಳ ಮುಖ್ಯ.ಯುವಜನತೆ ದುಶ್ಚಟಕ್ಕೆ ಅಂಟಿಕೊಳ್ಳದೆ ಸಮಾಜ ಕಟ್ಟುವ ಕೆಲಸ ಮಾಡಬೇಕಾಗಿದೆ. ದೇಶದ ಭವಿಷ್ಯದ ಬಗ್ಗೆ ಯುವ ಜನತೆ ಚಿಂತಿಸಬೇಕು, ಜೀವನದಲ್ಲಿ ಸತ್ಯ, ಪ್ರಾಮಾಣಿಕತೆಯನ್ನು ಅಳವಡಿಸಿಕೊಂಡು ಸ್ವಾಮಿ ವಿವೇಕಾನಂದರ ಆದರ್ಶಗಳು ನಮಗೆ ದಾರಿ ದೀಪವಾಗಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಶ್ರೀನಿವಾಸ,ಉಪನ್ಯಾಸಕರಾದ ಇಂದಿರ, ಶಿವಕುಮಾರ್, ಮಧುಸೂದನ, ಕನಿಕ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಎಂ ಸಿ ಚಂದನ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!