Thursday, September 19, 2024

ಪ್ರಾಯೋಗಿಕ ಆವೃತ್ತಿ

ಸ್ವಾಮಿ ವಿವೇಕಾನಂದರ ತತ್ವಗಳು ಎಂದಿಗೂ ಚಿರಸ್ಥಾಯಿ : ಡಾ.ಹೆಚ್.ಎನ್.ಗೋಪಾಲಕೃಷ್ಣ

ಸ್ವಾಮಿ ವಿವೇಕಾನಂದರು ಜೀವಿಸಿದ ಅವಧಿ ಬಹಳ ಕಡಿಮೆಯಾದರೂ, ಅವರ ತತ್ವಗಳು ಈ ಭೂಮಂಡಲ ಇರುವವರೆಗೂ ಚಿರಸ್ಥಾಯಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ನುಡಿದರು.

ಅವರು ಇಂದು ಅಂಬೇಡ್ಕರ್ ಭವನದಲ್ಲಿ ನಡೆದ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿವೇಕಾನಂದರ ತತ್ವಗಳು ಯುವಜನರ ಮನಸ್ಸಿಗೆ ನಾಟಬೇಕು. ಇಂದಿನ ಯುವಕರು ಕಲೆ, ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ರಾಜ್ಯ, ರಾಷ್ಟ್ರಕ್ಕೆ ಕಿರ್ತೀ ತಂದುಕೊಡಬೇಕು ಎಂದರು.

ಇಂದಿನ ವಿದ್ಯಾರ್ಥಿಗಳು ಒಳ್ಳೆಯ ವಿದ್ಯಾಭ್ಯಾಸ ಪಡೆದು ಸ್ವಯಂ ಉದ್ಯೋಗ ಮಾಡಬೇಕು. ಕ್ರೀಡೆಯಲ್ಲಿ ಭಾಗವಹಿಸಿ ಸಾಧನೆ ಮಾಡಬೇಕು. ಡ್ರಗ್ಸ್ ಮತ್ತು ಮಾದಕ ವಸ್ತುಗಳಿಂದ ದೂರವಿದ್ದು ಪ್ರಜ್ಞಾವಂತ ನಾಗರೀಕರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

15 ರಿಂದ29 ವರ್ಷಗಳ ಒಳಗಿನ ಗ್ರಾಮೀಣ ಭಾಗದ ಯುವಕ ಯುವತಿಯರಿಗೆ  ಮಾರ್ಗದರ್ಶನ ನೀಡಲು ಕರ್ನಾಟಕ ಸರ್ಕಾರ ಸ್ವಾಮಿ ವಿವೇಕಾನಂದ ಯುವ ಶಕ್ತಿ ಎಂಬ ಯೋಜನೆ ಜಾರಿಗೆ ತಂದಿದೆ. ಈ ಯೋಜನೆ ಯಡಿಯಲ್ಲಿ ಕೌಶಲ್ಯಾಭಿವೃದ್ದಿ, ಆರ್ಥಿಕ ಸಹಾಯ ಲಭ್ಯವಿದ್ದು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದರು.

ರಾಷ್ಟ್ರೀಯ ಯುವ ದಿನ ಪ್ರಯುಕ್ತ ಇಂದು ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ರಾಷ್ಟ್ರೀಯ ಯುವಜನೋತ್ಸವ ಕರ್ನಾಟಕದಲ್ಲಿ ನಡೆಯುತ್ತಿರುವುದು ಬಹಳ ಸಂತೋಷದ ವಿಷಯ. ಈ ಹಿಂದೆ ನಾನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತನಾಗಿದ್ದಾಗ  ಈ ಯುವಜನೋತ್ಸವ ಕಾರ್ಯಕ್ರಮ ಕರ್ನಾಟಕದಲ್ಲಿ ನಡೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ ಕೊಡಲಾಗಿತ್ತು, ಕರ್ನಾಟಕ ರಾಜ್ಯದಲ್ಲಿ  ನಡೆಯುತ್ತಿರುವುದು  ನನಗೆ ವೈಯಕ್ತಿಕವಾಗಿ ಬಹಳ ಸಂತೋಷವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂಪ್ರಕಾಶ್ ಜಿ, ನೆಹರು ಯುವ ಕೇಂದ್ರದ ಚಿನ್ನಗಿರಿಗೌಡ, ಅರುಣಕುಮಾರಿ, ಅನುಪಮ ಸೇರಿದಂತೆ ಇತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!