Thursday, September 19, 2024

ಪ್ರಾಯೋಗಿಕ ಆವೃತ್ತಿ

ಪತ್ರಕರ್ತರಿಗೆ `ಸ್ವೀಟ್ ಬಾಕ್ಸ್ ಗಿಫ್ಟ್’ ಲಂಚ : ತನಿಖೆಗೆ ಕಾಂಗ್ರೆಸ್ ಆಗ್ರಹ


  • #SayCM ಹ್ಯಾಷ್‌ಟ್ಯಾಗ್‌ನಲ್ಲಿ ಕಾಂಗ್ರೆಸ್ ಪಕ್ಷದ ಸರಣಿ ಟ್ವೀಟ್

  • ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದಂತೆ ಮಾಧ್ಯಮಗಳನ್ನೂ ಖರೀದಿಸುವ ಹುನ್ನಾರವೇ ?

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಆಯ್ದ ಕೆಲವು ಪತ್ರಕರ್ತರಿಗೆ ಸಿಎಂ ಕಚೇರಿಯಿಂದ ಸ್ವೀಟ್ ಬಾಕ್ಸ್  ನೊಂದಿಗೆ ಲಕ್ಷಾಂತರ ರೂ. ಲಂಚ ನೀಡಿರುವ ಆರೋಪಕ್ಕೆ ಸಂಬಂಧಿಸಿಂತೆ ರಾಜ್ಯ ಕಾಂಗ್ರೆಸ್ ಪಕ್ಷವು ನ್ಯಾಯಾಂಗ ತನಿಖೆಗೆ ಆಗ್ರಹಿಸಿದೆ.

“>

#SayCM ಹ್ಯಾಷ್‌ಟ್ಯಾಗ್‌ನಲ್ಲಿ ಕಾಂಗ್ರೆಸ್ ಪಕ್ಷ ಸರಣಿ ಟ್ವೀಟ್ ಮಾಡಿದೆ. “ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯ ‘ಸ್ವೀಟ್ ಬಾಕ್ಸ್ ಲಂಚ’ದ ಕುರಿತು ನ್ಯಾಯಾಂಗ ತನಿಖೆಯಾಗಬೇಕು. ಅದು ಸಾರ್ವಜನಿಕರ ತೆರಿಗೆ ಹಣದ ದುರ್ಬಳಕೆಯೇ? ಕಮಿಷನ್ ಭ್ರಷ್ಟಾಚಾರದ ಪಾಪದ ಹಣವೇ? ಆ ಹಣದ ಮೂಲ ಯಾವುದು? ಎಷ್ಟು ಹಣ ಲಂಚವಾಗಿ ನೀಡಲಾಗಿದೆ, ಪಡೆದವರೆಷ್ಟು, ವಾಪಸ್ ನೀಡಿದವರೆಷ್ಟು ಎಂಬಿತ್ಯಾದಿ ಸಂಗತಿ ರಾಜ್ಯದ ಜನತೆಗೆ ತಿಳಿಯಬೇಕು” ಎಂದು ಆಗ್ರಹಿಸಿದೆ.

“>

“ಸಿಎಂ ಕಚೇರಿ ನೀಡಿದ ₹2.5 ಲಕ್ಷ ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ. ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ದಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಸಿಎಂ ಉತ್ತರಿಸಬೇಕು” ಎಂದು ಕಾಂಗ್ರೆಸ್ ಒತ್ತಾಯಿಸಿದೆ.

“ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು. ಆ ಹಣ ಯಾರದ್ದು? ಸರ್ಕಾರದ್ದೇ? ಬಿಜೆಪಿ ಪಕ್ಷದ್ದೇ? ಮುಖ್ಯಮಂತ್ರಿಗಳದ್ದೇ? 40% ಕಮಿಷನ್ ಆ ಹಣದ ಮೂಲವೇ? ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ? ಬೊಮ್ಮಾಯಿಯವರೇ ಅವರೇ, ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ?” ಎಂದು ಸರಣಿ ಪ್ರಶ್ನೆಗಳನ್ನು ಕೇಳಲಾಗಿದೆ.

“ನಾವು ಸುಮ್ಮನೇ ಬೊಮ್ಮಾಯಿಯವರನ್ನು ಪೇಸಿಎಂ ಎಂದಿಲ್ಲ! ಈ ಸರ್ಕಾರ ಲಂಚವನ್ನು ಪಡೆಯುತ್ತದೆ, ಲಂಚವನ್ನು ನೀಡುತ್ತದೆ! ಇವೆಲ್ಲವೂ #PayCM ಮೂಲಕವೇ ನಡೆಯುತ್ತದೆಯೇ ಮುಖ್ಯಮಂತ್ರಿಗಳೇ? ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದಂತೆ ಮಾಧ್ಯಮಗಳನ್ನೂ ಖರೀದಿಸಿ ಅಕ್ರಮಗಳನ್ನು ಮುಚ್ಚಿಕೊಳ್ಳುವ ಹುನ್ನಾರವೇ?” ಎಂದು ಖಾರವಾಗಿ ಪ್ರಶ್ನಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!