Monday, October 21, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅ.24ರಂದು ಸ್ವಾತಂತ್ರ್ಯ ಹೋರಾಟಗಾರ ಟಿ. ಮರಿಯಪ್ಪ ನೆನಪಿನ ಕಾರ್ಯಕ್ರಮ

ಕರ್ನಾಟಕ ಸಂಘದ ಶಂಕರಗೌಡ ಭವನದಲ್ಲಿ ಅಕ್ಟೋಬರ್ 24 ರಂದು ಸ್ವಾತಂತ್ರ್ಯ ಹೋರಾಟಗಾರ ಹಾಗೂ ಮಾಜಿ ಸಚಿವರಾದ ಟಿ.ಮರಿಯಪ್ಪ ನೆನಪಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವು ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಅಂದು ಮಧ್ಯಾಹ್ನ 2 ಗಂಟೆಗೆ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಸಚಿವ ಹಾಗೂ ಕರ್ನಾಟಕ ರಾಜ್ಯ ಖಾತರಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಪಿ.ರವಿಕುಮಾರ್‌ಗೌಡ ವಹಿಸುವರು, ಮುಖ್ಯ ಅತಿಥಿಗಳಾಗಿ ಕುರುಬರ ಸಂಘದ ಜಿಲ್ಲಾಧ್ಯಕ್ಷ ಎಂ.ಎಲ್.ಸುರೇಶ್, ಮಾಜಿ ಅಧ್ಯಕ್ಷ ಕೆ.ಹೆಚ್.ನಾಗರಾಜು, ಮೈಸೂರು ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಕೀಲ ಬಿ.ಜೆ.ವಿಜಯಕುಮಾರ್ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಮಧ್ಯಾಹ್ನ 3 ಗಂಟೆಗೆ ನಿವೃತ್ತ ಕನ್ನಡ ಪ್ರಾಧ್ಯಾಪಕ ಹಾಗೂ ಚಿಂತಕ ಪ್ರೊ.ಎಚ್.ಎಲ್.ಮಹದೇವ ಅಧ್ಯಕ್ಷತೆಯಲ್ಲಿ ವಿಚಾರ ಸಂಕಿರಣ ನಡೆಯಲಿದ್ದು, ಮೈಸೂರು ಚಲೋ ಚಳುವಳಿಯ ಐತಿಹಾಸಿಕ ಮಹತ್ವದ ಕುರಿತು ಮೈಸೂರಿನ ಮಾನಸ ಗಂಗೋತ್ರಿಯ ನಿವೃತ್ತ ಪ್ರಾಧ್ಯಾಪಕ ಡಾ.ಎನ್.ಎಸ್.ರಂಗರಾಜು ಮತ್ತು ಟಿ.ಮರಿಯಪ್ಪ, ವ್ಯಕ್ತಿ, ವ್ಯಕ್ತಿತ್ವ ಹಾಗೂ ಸಾಧನೆ ಕುರಿತು ವಕೀಲ ಜೀರಹಳ್ಳಿ ರಮೇಶ್ ವಿಷಯ ಮಂಡನೆ ಮಾಡಲಿದ್ದಾರೆ ಎಂದರು.

ಸಂಜೆ 5 ಗಂಟೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕರ್ನಾಟಕ ಸಂಘದ ಪ್ರಧಾನ ಪೋಷಕ ಬಿ.ರಾಮಕೃಷ್ಣ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಸಮಾರೋಪ ನುಡಿಗಳನ್ನಾಡುವರು. ಆರ್‌ಟಿಓ ನೌಕರರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಅವರು ಟಿ.ಮರಿಯಪ್ಪ ಭಾವಚಿತ್ರ ಅನಾವರಣ ಮಾಡುವರು. ಟಿ.ಮರಿಯಪ್ಪ ಅವರ ಪುತ್ರ ಟಿ.ಎಂ.ರಾಜಕುಮಾರ್ ಗೌರವ ಉಪಸ್ಥಿತರಿರಲಿದ್ದು, ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಸನ್ಮಾನಿಸುವರು, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಎಂ.ಶ್ರೀನಿವಾಸ್ ಪಾಲ್ಗೊಳ್ಳುವರು ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ನಿರ್ದೇಶಕರಾದ ನಾಗಪ್ಪ, ಜಯರಾಮ್ ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!