ಮಂಡ್ಯ ಜಿಲ್ಲಾ ಕಿವುಡರ ಸಂಘದಿಂದ ಅಂತರಾಷ್ಟ್ರೀಯ ಲಯನ್ಸ್ ಜಿಲ್ಲೆ ೩೧೭ ಜಿ, ಪ್ರಾಂತ್ಯ ೦೧ ಹಾಗೂ ಕ್ಷೀರಸಾಗರ ಮಿತ್ರ ಕೂಟ ಸಂಯುಕ್ತಾಶ್ರಯದಲ್ಲಿ ಡಿ.೧೯ರಿಂದ ೨೧ವರೆಗೆ ೧೧ನೇ ಕರ್ನಾಟಕ ರಾಜ್ಯ ಮಟ್ಟದ ಕಿವುಡರ ಟಿ-೨೦ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಕ್ಷೀರಸಾಗರ ಮಿತ್ರ ಕೂಟದ ಕೃಷ್ಣೇಗೌಡ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ರಿಕೆಟ್ ಪಂದ್ಯಾವಳಿಯು ಮಂಡ್ಯ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣ, ಪಿಇಟಿ ಕ್ರೀಡಾಂಗಣ ಮತ್ತು ಮಂಡ್ಯ ವಿವಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.
ಡಿ.೧೯ರಂದು ನಡೆಯುವ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆಯನ್ನು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ವಹಿಸುವರು. ಅಂತರಾಷ್ಟ್ರೀಯ ಲಯನ್ಸ್ ಜಿಲ್ಲಾ ರಾಜ್ಯಪಾಲ ಲಯನ್ ಜಿ.ಎ.ರಮೇಶ್ ಉದ್ಘಾಟಿಸುವರು. ಎಸ್.ಬಿ.ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಡಾ.ಮೀರಾಶಿವಲಿಂಗಯ್ಯ ಕ್ರೀಡಾಪಟುಗಳಿಗೆ ಶುಭ ಹಾರೈಸಲಿದ್ದರು. ಲಯನ್ಸ್ ಸಂಸ್ಥೆಯ ಪ್ರಾಂತೀಯ ಅಧ್ಯಕ್ಷ ಡಾ.ಶಂಕರ, ಮಂಡ್ಯ ಲಯನ್ಸ್ನ ಅಧ್ಯಕ್ಷ ಡಿ.ನಿಂಗೇಗೌಡ, ಮೈಷುಗರ್ ಸಿಟಿ ಲಯನ್ಸ್ ಸಂಸ್ಥಾಪಕ ಅಧ್ಯಕ್ಷ ಲಯನ್ಸ್ ಕೆ.ಎಸ್.ಪ್ರೇಮಾನಂದ ಸಾಗರ್, ಮಧುರ ಲಯನ್ಸ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಆನಂದ, ಸೆಂಟಿನಿಯಲ್ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಮೀನಾ ಆನಂದ ಸೇರಿದಂತೆ ಇತರರು ಉಪಸ್ಥಿತರಿರಲಿದ್ದಾರೆ ಎಂದರು.
ಶಾಸಕ ಪಿ.ರವಿಕುಮಾರ್ ಗೌಡ ಅಧ್ಯಕ್ಷತೆಯಲ್ಲಿ ಡಿ.೨೧ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಲಯನ್ಸ್ ಜಿಲ್ಲೆ ೩೧೭ಜಿ ಯ ಜಿಲ್ಲಾ ರಾಜ್ಯಪಾಲ ಕೆ.ಎಲ್.ರಾಜಶೇಖರ ಬಹುಮಾನ ವಿತರಿಸುವರು.
ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ನ ಸಂಸ್ಥಾಪಕ ಅಧ್ಯಕ್ಷ ಎಂ.ವಿನಯ್‌ಕುಮಾರ್ ಸಮಾರೋಪ ನುಡಿಗಳನ್ನಾಡುವರು. ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯ ಆನಂದ, ಶಾಸಕ ಎಚ್.ಟಿ.ಮಂಜು, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಲಯನ್ಸ್ ಸಂಸ್ಥೆಯ ಜಯಕುಮಾರ್, ಸಿದ್ದೇಗೌಡ ಅತಿಥಿಗಳಾಗಿ ಭಾಗವಹಿಸುವರು. ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲ ಪಟುಗಳಿಗೂ ನೆನಪಿನ ಕಾಣಿಕೆ ವಿತರಣೆ ಮಾಡಲಾಗುವುದು ಎಂದು ಇದೇ ವೇಳೆ ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷ ಡಾ.ಶಂಕರ, ಕ್ಷೀರಸಾಗರ ಮಿತ್ರ ಕೂಟದ ನಾಗೇಶ್, ಮಂಡ್ಯ ಜಿಲ್ಲಾ ಕಿವುಡರ ಸಂಘದ ಅಧ್ಯಕ್ಷ ಆರ್.ಯೋಗೇಶ್, ಉಪಾಧ್ಯಕ್ಷ ಬಿ.ವೆಂಕಟೇಶ್ ಪ್ರಸಾದ್, ಕರ‍್ಯದರ್ಶಿ ಎಸ್.ಎಂ.ನAದೀಶ್, ಕ್ರೀಡಾ ಕರ‍್ಯದರ್ಶಿ ವೈ.ಎಂ.ಮಹೇಶ್ ಇದ್ದರು.




