ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಲಾವೃತವಾಗಿರುವ ಬೀಡಿ ಕಾಲೋನಿಗೆ ಇಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಡ್ಯ ನಗರದ ಬೀಡಿ ಕಾರ್ಮಿಕರ ಕಾಲೋನಿಯಲ್ಲಿ ಅಂದಾಜು 1500 ಮನೆಗಳು ಇದ್ದು, ಇಲ್ಲಿ ವಾಸವಿರುವ ಜನರಿಗೆ ಮಳೆ ನೀರು ಮನೆಯೊಳಗೆ ತುಂಬಿರುವ ಹಿನ್ನೆಲೆಯಲ್ಲಿ ದಿನನಿತ್ಯದ ಕೆಲಸ ಮಾಡಿಕೊಳ್ಳಲು ತೊಂದರೆಯಾಗುತ್ತಿದ್ದು, ಅಧಿಕಾರಿಗಳು ಪರಿಶೀಲಿಸಿ ಬೀಡಿ ಕಾರ್ಮಿಕರ ಕಾಲೋನಿಯ ನಿವಾಸಿಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸುವಂತೆ ಡಿಸಿ ಅಶ್ವತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಂಡ್ಯ ನಗರ ಸಭೆ ಆಯುಕ್ತ ಮಂಜುನಾಥ್, ಸದಸ್ಯರಾದ ನಯೀಂ, ಜಾಕೀರ್ ಪಾಷ ಮತ್ತಿತರರು ಉಪಸ್ಥಿತರಿದ್ದರು.