ಮಂಡ್ಯ ಜಿಲ್ಲಾ ಮಡಿವಾಳರ ಸಂಘದ ವತಿಯಿಂದ 2023ರ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಗಳಲ್ಲಿ ಶೇ.80 ಅಂಕಗಳು ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದ ಸಮುದಾಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಉದ್ಧೇಶಿಸಿಲಾಗಿದೆ, ಪ್ರತಿಭಾವಂತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಸಂಘದ ಜಿಲ್ಲಾಧ್ಯಕ್ಷ ಎಂ.ಎನ್ ರವಿ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಮಡಿವಾಳ ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುವುದು, ಕಡು ಬಡವ ಮಕ್ಕಳನ್ನು ದತ್ತು ತೆಗೆದುಕೊಂಡು, ಅವರ ವಿದ್ಯಾಭ್ಯಾಸದ ಖರ್ಚು ವೆಚ್ಚಗಳನ್ನು ಭರಿಸಲು ರಾಜ್ಯ ಸಂಘದ ರಾಜ್ಯಾಧ್ಯಕ್ಷ ಸಿ.ನಂಜಪ್ಪ ತೀರ್ಮಾನಿಸಿರುವುದರಿಂದ ಸಮುದಾಯದ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಆಸಕ್ತರು ಕರ್ನಾಟಕ ರಾಜ್ಯ ಮಡಿವಾಳರ ಸಂಘ (ರಿ), ನಂ.17, ಶಿರೂರು ಪಾರ್ಕ್ ರಸ್ತೆ, ಶೇಷಾದ್ರಿಪುರಂ, ಬೆಂಗಳೂರು-560020 ಈ ವಿಳಾಸಕ್ಕೆ ಜೂ. 30ರೊಳಗೆ ತಲುಪುವಂತೆ ನೇರವಾಗಿ ಅಥವಾ ಅಂಚೆ ಮೂಲಕ ತಮ್ಮ ಮಕ್ಕಳ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಎರಡು ಭಾವಚಿತ್ರ ಮತ್ತು ಆಧಾರ ಕಾರ್ಡ್ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದರು.
ಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ವಿ.ಗೋವಿಂದಯ್ಯ, ರಾಜ್ಯ ಸಂಘದ ನಿರ್ದೇಶಕಿ ಪದ್ಮಾವತಿ, ಮುಖಂಡ ಪ್ರಸನ್ನ ಉಪಸ್ಥಿತರಿದ್ದರು.




