Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ- ಪರಿಶೀಲನೆ

ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಡಾ.ಕುಮಾರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲ್ಲೂಕು ಕಚೇರಿಯಲ್ಲಿ ಸುಮಾರು ತಿಂಗಳಿನಿಂದ ಬಾಕಿ ಇದ್ದ ಆರ್.ಟಿ.ಸಿ ಗೆ ಸಂಬಂಧಿಸಿದ ಅರ್ಜಿಯನ್ನು ಸ್ಥಳದಲ್ಲೇ ಪರಿಶೀಲಿಸಿ ವಿಲೇವಾರಿ ಮಾಡಿದರು.

ತಾಲ್ಲೂಕು‌ ಕಚೇರಿಯಲ್ಲಿ ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿಗಳನ್ನು ಸ್ವೀಕಾರ ಮಾಡಿ ಸಂಬಂಧಿಸಿದ ಅಧಿಕಾರಿಗಳಿಗೆ ಪರಿಶೀಲಿಸಿ ಶೀಘ್ರವಾಗಿ ವಿಲೇವಾರಿ ಮಾಡಲು ತಿಳಿಸಿದರು. ನಿಗದಿತ ಅವಧಿಯಲ್ಲಿ ಅರ್ಜಿಗಳು ವಿಲೇವಾರಿಯಾಗಬೇಕು. ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಿ ಕಚೇರಿಗಳಿಗೆ ಅನಿವಾರ್ಯ ಅಲೆದಾಟವನ್ನು ತಪ್ಪಿಸಿ ಎಂದರು.

ಜಾಹೀರಾತು

ನಂತರ ಕಚೇರಿಯಲ್ಲಿ ಪಹಣಿ ತಿದ್ದುಪಡಿ, ಭೂಮಿ ಖಾತೆ ಬದಲಾವಣೆ, ಸರ್ವೆ, ಮೋಜಿಣಿ ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು‌ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ನೀಡಿದರು. ತಾಲ್ಲೂಕು ಕಚೇರಿ ಪರಿಶೀಲನೆಯ ನಂತರ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮತ್ತು ಪಂಡಿತಹಳ್ಳಿ ನಾಡಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು.

ಇದೇ ವೇಳೆ ಸಾರ್ವಜನಿಕರು ಸಹ ತಮ್ಮ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಅಹವಾಲುಗಳನ್ನು ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ ಸುದ್ದಿಗಾರರೊಂದಿಗೆ ಮಾತನಾಡಿ, ತಾಲ್ಲೂಕು ಕಚೇರಿಯಲ್ಲಿ ಸಾಕಷ್ಟು ಸಮಸ್ಯೆ ಭೂಮಿ ವಿಭಾಗ, ಆರ್ ಟಿಸಿ ವಿಭಾಗ ಕ್ಕೆ ಭೇಟಿ ನೀಡಿ ನಾನೇ ಕುಳಿತು ಸಮಸ್ಯೆಗಳನ್ನು ಪರಿಶೀಲನೆ ನಡೆಸಿದ್ದು, ಕೆಲವು ಸಮಸ್ಯೆಗಳನ್ನು ಬಗೆಹರಿಸಿದ್ದು ಮತ್ತೆ ಕೆಲವು ಸಮಸ್ಯೆಗಳನ್ನು ತಹಸೀಲ್ದಾರ್ ಗೆ ಬಗೆಹರಿಸಲು ಸೂಚನೆ ನೀಡಿದ್ದೇನೆ ಎಂದರು. ಈ ವೇಳೆ ತಹಸಿಲ್ದಾರ್ ಲೋಕೇಶ್ ಸೇರಿದಂತೆ ಅಧಿಕಾರಿಗಳು ಇದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!