Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಸರ್ಕಾರಿ ರಸ್ತೆ ಖಾಸಗಿಯವರಿಗೆ ಪರಭಾರೆ : ತಾಲ್ಲೂಕು ಕಚೇರಿಗೆ ಮುತ್ತಿಗೆ

ಮಂಡ್ಯ ತಾಲ್ಲೂಕಿನ ಬೂದನೂರು ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಸರ್ಕಾರಿ ರಸ್ತೆಯನ್ನು ಖಾಸಗಿ ವ್ಯಕ್ತಿಗೆ ಖಾತೆ ಮಾಡಿರುವುದನ್ನು ವಿರೋಧಿಸಿ ನಿವೇಶನ ರಹಿತರು ಬೂದನೂರು ಸತೀಶ್ ಅವರ ನೇತೃತ್ವದಲ್ಲಿ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ತಹಶಿಲ್ದಾರ್, ಆರ್ ಐ ಹಾಗೂ ವಿ ಎ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬೂದನೂರು ಗ್ರಾಮದಲ್ಲಿ ನಿವೇಶನ ರಹಿತರಿಗೆ ನಿವೇಶನ ಮಂಜೂರು ಆಗಿದ್ದು, ಅಧಿಕಾರಿಗಳು ಹಣದ ಆಸೆಗೆ ಸರ್ಕಾರಿ ಜಮೀನಿಗೆ ತಾವೆ ಖಾಸಗಿ ವ್ಯಕ್ತಿಗಳಿಂದ ಕೋರ್ಟ್ ನಲ್ಲಿ ತಡೆಯಾಜ್ಞೆ ತರಲು ಸಹಾಯ ಮಾಡಿದ್ದಾರೆ. ಸದ್ಯ ಸರ್ಕಾರಿ ರಸ್ತೆಯನ್ನೆ 5 ಲಕ್ಷ ಹಣ ಪಡೆದು ಖಾಸಗಿ ವ್ಯಕ್ತಿಗೆ ಖಾತೆ ಮಾಡಿರುವುದು ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿದರು.

ಹತ್ತು ವರ್ಷಗಳಿಂದ ನಿವೇಶನಕ್ಕಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಆದರೆ ಅಧಿಕಾರಿಗಳು ಹಣದ ಆಸೆಗೆ ಬಡವರಿಗೆ ಮೋಸ ಮಾಡಿ, ಹಣ ಇರುವವರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಬಡವರಿಗೆ ಅನ್ಯಾಯ ಮಾಡುತ್ತಿದ್ದಾರೆ. ತಕ್ಷಣ ಕಂದಾಯ ಇಲಾಖೆಯ ಎಫ್.ಡಿ.ಎ ತಿಪ್ಪೇಸ್ವಾಮಿ, ಆರ್’ ಐ ಗಿರೀಶ್, ವಿಎ ರೇಣುಕಮ್ಮ ಅವರನ್ನು ತಕ್ಷಣ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸುಧಾ, ಎಲ್ಲಮ್ಮ, ಪದ್ಮ, ಸವಿತಾ, ಸರೋಜಮ್ಮ ಸೇರಿದಂತೆ ನಿವೇಶನರಹಿತರು ಪಾಲ್ಗೊಂಡಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ