Friday, September 20, 2024

ಪ್ರಾಯೋಗಿಕ ಆವೃತ್ತಿ

ಶಿಕ್ಷಕ ಆತ್ಮಹತ್ಯೆ: ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸದ ಕಾರಣ ಮನನೊಂದು ಆತ್ಮಹತ್ಯೆಗೆ ಶರಣಾದ ಶಿಕ್ಷಕ ಶಂಕ್ರಪ್ಪ ಬೋರೆಡ್ಡಿ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮಂಡ್ಯ ತಾಲ್ಲೂಕಿನ ಶಿವಳ್ಳಿಯ ಸರ್.ಎಂ.ವಿಶ್ವೇಶ್ವರಯ್ಯ ಅನುದಾನಿತ ಪ್ರೌಢಶಾಲೆಯ ಅಧ್ಯಾಪಕ ವೃಂದ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ಕರ್ತವ್ಯದಲ್ಲಿ ಪಾಲ್ಗೊಂಡರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಯಚೂರು ಜಿಲ್ಲೆಯ ಸಿಂಧನೂರಿನ ರೆಡ್ಡಿ ಪ್ರೌಢಶಾಲೆಯ ಶಿಕ್ಷಕ ಶಂಕ್ರಪ್ಪ ಬೋರೆಡ್ಡಿ ,138 ದಿನಗಳಿಂದ ಹೋರಾಟ ನಡೆಯುತ್ತಿದ್ದರೂ ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಅವರ ಸಾವಿಗೆ ಸರ್ಕಾರದ ನಿರ್ಲಕ್ಷ್ಯ ಧೋರಣೆಯೇ ಕಾರಣ ಎಂದು ಆರೋಪಿಸಿ ಗುರುವಾರ ಸರ್. ಎಂ. ವಿಶ್ವೇಶ್ವರಯ್ಯ ಅನುದಾನಿತ ಶಾಲೆಯ‌ ಅಧ್ಯಾಪಕ ಮತ್ತು ಶಿಕ್ಷಕ ವೃಂದ ಕಪ್ಪು ಪಟ್ಟಿಯನ್ನು ಧರಿಸಿ ಸಾಂಕೇತಿಕವಾಗಿ ಪ್ರತಿಭಟಿಸಿ ಶಾಲಾ ಕರ್ತವ್ಯದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಅಧಿಕಾರಿಗಳಾದ ಲಕ್ಷ್ಮೀಶ್ ಮುಖ್ಯ ಶಿಕ್ಷಕರಾದ ಹೆಚ್. ಕೆ .ನಾಗರಾಜು,
ಸಹ ಶಿಕ್ಷಕರಾದ ಎಂ. ಎನ್ .ನಿಂಗರಾಜು ,ಎಂ.ಯು.ಶ್ವೇತಾ, ಶೈಲಜಮ್ಮ,ಶೋಭಾ,ಮಲ್ಲಿಕಾರ್ಜುನ್,ವಿನಯ್ ಕುಮಾರ್ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!