ಮಂಡ್ಯ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್, ಇಂಡಿಯನ್ ಸೈನ್ಸ್ ರಿಸರ್ಚ್ ಆರ್ಗನೈಜೇಷನ್ ,ಅಧ್ಯಾಪನ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಆಗಸ್ಟ್ 30ರಂದು ಮಂಡ್ಯ ನಗರದ ಎ ಅಂಡ್ ಎ ಕನ್ವೆನ್ಷನ್ ಹಾಲಿನಲ್ಲಿ ಅಧ್ಯಾಪನ ವಿಜ್ಞಾನೋತ್ಸವ 2024 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಾಪನ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರಾದ ದಿವ್ಯಶ್ರೀ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲಾ ಮಟ್ಟದ ವಿಜ್ಞಾನ ತರಂಗ ಸ್ಪರ್ಧೆಯನ್ನು ಮಂಡ್ಯ ಜಿಲ್ಲಾ ವ್ಯಾಪ್ತಿಯ ಖಾಸಗಿ ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಐದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದೆ ಎಂದರು.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ವತಿಯಿಂದ ಐದರಿಂದ 10ನೇ ತರಗತಿ ಮಕ್ಕಳಿಗೆ ಅಗತ್ಯವಿರುವ ವಿಜ್ಞಾನ ಮಾದರಿಯ ಪ್ರದರ್ಶನವನ್ನು ಸಂಸ್ಥೆಯ ವಿದ್ಯಾರ್ಥಿಗಳು ಪ್ರಸ್ತುತಪಡಿಸಲಿದ್ದಾರೆ. ಇಸ್ರೋ ಸಂಸ್ಥೆಯು ಫೇಸ್ ಆನ್ ವಿಲ್ ಪ್ರದರ್ಶನ ಮಾಡಲಿದೆ. ಜೊತೆಗೆ 300 ವಿದ್ಯಾರ್ಥಿಗಳಿಗೆ ಇಸ್ರೋ ಮ್ಯೂಸಿಯಂ ವೀಕ್ಷಣೆಗೆ ಅವಕಾಶ ಕಲ್ಪಿಸಿದೆ ಎಂದರು .
ತಾಲೂಕು ಮಟ್ಟದಲ್ಲಿ ವಿಜೇತರಾದ ಮೂವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು. ಅಲ್ಲದೆ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಮಾಣ ಪತ್ರ ವಿತರಿಸಲಾಗುವುದು ಎಂದರು.
ಪ್ರವೀಣ್ ಮಾತನಾಡಿ ಸರ್ಕಾರಿ ಶಾಲೆಯ ಶಾಲೆ ವಿದ್ಯಾರ್ಥಿಗಳು ಭಾಗವಹಿಸುತ್ತಿರುವುದರಿಂದ ಶಿಕ್ಷಣ ಇಲಾಖೆಯ ಪಾತ್ರ ದೊಡ್ಡದಾಗಿದೆ ಎಂದರು.
ಅಂದು ನಡೆಯಲಿರುವ ಕಾರ್ಯಕ್ರಮವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದು ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅಧ್ಯಕ್ಷತೆ ವಹಿಸಲಿದ್ದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಭಾಗವಹಿಸಲಿದ್ದಾರೆ ಎಂದರು .
ಗೋಷ್ಠಿಯಲ್ಲಿ ಪೃಥ್ವಿ ,ಪ್ರಿಯಾಂಕ ಉಪಸ್ಥಿತರಿದ್ದರು. ಗೋಷ್ಠಿಯಲ್ಲಿ ಪ್ರದೀಪ್ ಕುಮಾರ್, ಪೃಥ್ವಿ ,ಪ್ರಿಯಾಂಕ ಉಪಸ್ಥಿತರಿದ್ದರು.




