Friday, April 19, 2024

ಪ್ರಾಯೋಗಿಕ ಆವೃತ್ತಿ

ತಾಂತ್ರಿಕ ಕೌಶಲ್ಯದಿಂದ ಉತ್ತಮ ಉದ್ಯೋಗಾವಕಾಶ

ವಿದ್ಯಾರ್ಥಿಗಳು ತಾಂತ್ರಿಕ ಕೌಶಲ್ಯವನ್ನು ಪಡೆಯುವುದರ ಮೂಲಕ ಉತ್ತಮ ಉದ್ಯೋಗ ಪಡೆಯಬಹುದೆಂದು ಉಪವಿಭಾಗಾಧಿಕಾರಿ ಐಶ್ವರ್ಯ ತಿಳಿಸಿದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ “ಉದ್ಯೋಗ” ಕರ್ನಾಟಕ ವಿನೂತನ ಯೋಜನೆ- ತಾಂತ್ರಿಕ ಕೇಂದ್ರಗಳನ್ನಾಗಿ ಉನ್ನತೀಕರಿಸಲಾಗಿರುವ 150 ಐಟಿಐಗಳ ಲೋಕಾರ್ಪಣೆ ಕಾರ್ಯಕ್ರಮದಡಿಯಲ್ಲಿ ಮಂಡ್ಯ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಲೋಕಾರ್ಪಣೆ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಬಹಳ ಉಪಯೋಗಕ್ಕೆ ಬರುವಂತಹ ತಂತ್ರಜ್ಞಾನಗಳು, ಐ.ಒ.ಪಿ ರೋಬೋಟಿಕ್, ಆರ್ಟಿಫಿಷಿಯಲ್ ಇಂಟರ್ನೇಷನ್ಸ್ ಒಂದು ತಂತ್ರಜ್ಞಾನಗಳ ಮೂಲಕ ಇದನ್ನೆಲ್ಲಾ ಕಲಿತು ಇದರಲ್ಲಿ ಉನ್ನತಿ ಪಡೆದರೆ ಜೀವನದಲ್ಲಿ ಬಹಳ ಉತ್ತಮವಾದ ಉದ್ಯೋಗಾವಕಾಶಗಳು ಲಭಿಸುತ್ತವೆ ಎಂದರು.

ಕೌಶಲ್ಯಾಭಿವೃದ್ಧಿ ಕೈಗಾರಿಕಾ ಉದ್ಯಮದಲ್ಲಿ ಬಹಳ ಉನ್ನತವಾದ ತಂತ್ರಜ್ಞಾನಗಳನ್ನು ಬಳಸಲಾಗುತ್ತಿದೆ. ವಿದ್ಯಾರ್ಥಿಗಳು ಸ್ವಲ್ಪ ಹಳೆಯ ತಂತ್ರಜ್ಞಾನಗಳನ್ನು ಬಳಸುತ್ತಿದ್ದು, ಆ ಒಂದು ಕೌಶಲ್ಯ ಅಂತರವನ್ನು ಕಡಿಮೆ ಮಾಡುವುದಕ್ಕೆ ಆಟೋ ಲೈಫ್ ಸೆಂಟರ್‌ಗಳು ಉನ್ನತೀಕರಿಸಿದ ವಿದ್ಯಾಲಯಗಳ ಪರಿಕಲ್ಪನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಹೊರಹೊಮ್ಮುತ್ತಿವೆ ಎಂದರು.

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ನಾಗನಂದ ರವರು ಮಾತನಾಡಿ, ಐಟಿಐ ವಿದ್ಯಾರ್ಥಿಗಳಲ್ಲಿ ಇರುವ ಕೌಶಲ್ಯ ಅಂತರವನ್ನು ಕಡಿಮೆ ಮಾಡಲು ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ವಿಶೇಷವಾಗಿ ತಾಂತ್ರಿಕ ತರಬೇತಿಯನ್ನು ನೀಡುವುದು ಕೈಗಾರಿಕಾ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದರು.

ಕರ್ನಾಟಕ ರಾಜ್ಯದಲ್ಲಿ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ತಾಂತ್ರಿಕ ಕೇಂದ್ರಗಳನ್ನಾಗಿ ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡುತ್ತಿರುವುದು ಸಂತೋಷದ ವಿಷಯ. ಇದರಲ್ಲಿ ಮಂಡ್ಯ ಜಿಲ್ಲೆಯ 6 ಕೈಗಾರಿಕಾ ಸಂಸ್ಥೆಗಳನ್ನು ಉನ್ನತೀಕರಿಸಲಾಗುತ್ತಿದೆ ಎಂದರು.

ಶಾಸಕ ಎಂ. ಶ್ರೀನಿವಾಸ್ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯನ್ನು ಲೋಕಾರ್ಪಣೆಗೊಳಿಸಿದರು. ನಗರಸಭೆ ಅಧ್ಯಕ್ಷ ಹೆಚ್.ಎಸ್ ಮಂಜು, ಮೈಷುಗರ್ ಕಾರ್ಖಾನೆ ಅಧ್ಯಕ್ಷ ಶಿವಲಿಂಗೇಗೌಡ, ನಿರ್ಮಿತ ಕೇಂದ್ರದ ನಿರ್ದೇಶಕ ಪಿ.ಬಿ ನರೇಶ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ವೇಣುಗೋಪಾಲ್, ಬಿ. ಜಿ ಶಂಕರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!