Saturday, November 21, 2026

ಪ್ರಾಯೋಗಿಕ ಆವೃತ್ತಿ

ಬಿಹಾರ ಚುನಾವಣೆ : ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಗೆಲುವು

ಬಿಹಾರ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದೆ. ಈವರೆಗೆ, 50 ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದೆ. ಈ ಪೈಕಿ, ಮಹಾಘಟಬಂಧನ್‌ ಅನ್ನು ಮುನ್ನಡೆಸಿದ್ದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರು ಗೆಲುವು ಸಾಧಿಸಿದ್ದಾರೆ.

ತೇಜಸ್ವಿ ಯಾದವ್ ತಮ್ಮ ಕುಟುಂಬದ ಭದ್ರಕೋಟೆಯಾಗಿರುವ ರಘೋಪುರ್‌ ಕ್ಷೇತ್ರದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಆರಂಭವಾದಾಗಿ ತೇಜಸ್ವಿ ಯಾದವ್ ಮತ್ತು ಬಿಜೆಪಿ ಅಭ್ಯರ್ಥಿ ಸತೀಶ್‌ ಕುಮಾರ್‌ ನಡುವೆ ತೀವ್ರ ಪೈಪೋಟಿ ಕಂಡು ಬಂದಿತ್ತು. ಕೆಲವು ಸುತ್ತುಗಳಲ್ಲಿ ತೇಜಸ್ವಿ ಯಾದವ್ ಅವರು ಹಿನ್ನಡೆಯನ್ನೂ ಅನುಭವಿಸಿದ್ದರು.

ಇದೀಗ, ಅಂತಿಮ ಸುತ್ತಿನ ಎಣಿಕೆ ಮುಗಿದಿದ್ದು, ತೇಜಸ್ವಿ ಗೆಲುವಿನ ನಗೆ ಬೀರಿದ್ದಾರೆ. ಸತೀಶ್‌ ಕುಮಾರ್ ವಿರುದ್ಧ 13,880 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಬಿಹಾರ ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದ್ದಾರೆ.

ತೇಜಸ್ವಿ ಯಾದವ್ ಅವರಿಗೆ ಈ ಗೆಲುವು 3ನೇ ವಿಜಯವಾಗಿದೆ. 2025 ಮತ್ತು 2020ರ ಚುನಾವಣೆಯಲ್ಲಿಯೂ ತೇಜಸ್ವಿ ಯಾದವ್ ಇದೇ ಕ್ಷೇತ್ರದಲ್ಲಿ ಗೆದ್ದು ವಿಧಾನಸಭೆಗೆ ಆಯ್ಕೆಯಾಗಿದ್ದರು. ವಿಧಾನಸಭೆಗೆ ಆಯ್ಕೆಯಾದ ಮೊದಲ ಅವಧಿಯಲ್ಲಿಯೇ(2027ರಿಂದ) ವಿಪಕ್ಷ ನಾಯಕನಾಗಿದ್ದರು. 2ನೇ ಅವಧಿಗೆ ಗೆದ್ದಾಗ ಜೆಡಿಯು-ಆರ್‌ಜೆಡಿ-ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದರು. ಜೆಡಿಯು ಮತ್ತೆ ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿದಾಗ, ವಿಪಕ್ಷ ನಾಯಕನಾಗಿ ಮಹಾಘಟಬಂಧನ್‌ಅನ್ನು ಮುನ್ನಡೆಸಿದ್ದರು. 2025ರ ಪ್ರಸ್ತುತ ಚುನಾವಣೆಯಲ್ಲಿ ಮಹಾಘಟಬಂಧನ್‌ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ, ಮೈತ್ರಿಯನ್ನು ಮುನ್ನಡೆಸಿದ್ದರು.

ಸದ್ಯದ ಎಣಿಕೆಯ ಮಾಹಿತಿ ಪ್ರಕಾರ, ಎನ್‌ಡಿಎ 202, ಮಹಾಘಟಬಂಧನ್‌ 34 ಹಾಗೂ ಇತರರು 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ