Sunday, May 19, 2024

ಪ್ರಾಯೋಗಿಕ ಆವೃತ್ತಿ

ಬೀದಿಜಗಳಕ್ಕೆ ಕೋಮುಬಣ್ಣ| ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ತೇಜಸ್ವಿಸೂರ್ಯ; ಕಾಂಗ್ರೆಸ್ ದೂರು

ಬೆಂಗಳೂರಿನ ನಗರ್ತಪೇಟೆಯಲ್ಲಿ ನಡೆದ ಲೌಡ್ ಸ್ಪೀಕರ್ ಘಟನೆಗೆ ಕೋಮು ಬಣ್ಣ ನೀಡಿ, ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿದ ಬಿಜೆಪಿ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯನ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್, ‘ನಾಮಪತ್ರ ಮಾನ್ಯ ಮಾಡಬೇಡಿ’ ಎಂದು ಚುನಾವಣಾ ಆಯೋಗವನ್ನು ಆಗ್ರಹಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಐಟಿ ಸೆಲ್, “ವೈಯಕ್ತಿಕ ಕಾರಣಗಳಿಗಾಗಿ ನಡೆದ ಗಲಾಟೆಯನ್ನು ಹಿಡಿದುಕೊಂಡು ಕೋಮು ಸಂಘರ್ಷ ಉಂಟುಮಾಡಲು ಹವಣಿಸಿದ ತೇಜಸ್ವಿ ಸೂರ್ಯ ಚುನಾವಣಾ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ರಾಜ್ಯದ ಚುನಾವಣಾ ಆಯುಕ್ತರು ಕೂಡಲೇ ಸಂಸದ ತೇಜಸ್ವಿ ಸೂರ್ಯನ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಈತನ ಉಮೇದುವಾರಿಕೆಯನ್ನು ಮಾನ್ಯ ಮಾಡಬಾರದು ಹಾಗೂ ಚುನಾವಣಾ ಪ್ರಚಾರಕ್ಕೆ ನಿರ್ಬಂಧ ವಿಧಿಸಬೇಕು. ನಿಷ್ಪಕ್ಷಪಾತ ಹಾಗೂ ಪಾರದರ್ಶಕ ಚುನಾವಣೆಗಾಗಿ ಚುನಾವಣಾ ಆಯೋಗ ಈ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭಾವಿಸಿದ್ದೇವೆ” ಎಂದು ತಿಳಿಸಿದೆ.

“>

“ತೇಜಸ್ವಿ ಸೂರ್ಯ ಎಂಬ ಎಳೆ ಕೂಸಿನಂತಹ ಸಂಸದ ಕೋವಿಡ್ ಬಂದಾಗ ಫುಟ್ಬಾಲ್ ಆಡೋಕೆ ಹೋಗಿದ್ದರು, ನೆರೆ ಬಂದಾಗ ದೋಸೆ ತಿನ್ನೋಕೆ ಹೋಗಿದ್ದರು, ಕನ್ನಡಿಗರಿಗೆ ಅನ್ಯಾಯವಾದಾಗ ಎಮರ್ಜೆನ್ಸಿ ಎಕ್ಸಿಟ್ ನಲ್ಲಿ ಹಾರೋಕೆ ಹೋಗಿದ್ದರು, ಕನ್ನಡಿಗ ಯುವಕರು ಉದ್ಯೋಗ ಕೇಳುತ್ತಿದ್ದಾಗ ನಾಪತ್ತೆಯಾಗಿದ್ದರು, ಆದರೆ ಈಗ ಬೀದಿ ಜಗಳದ ವಿಷಯಕ್ಕೆ ಮಾತ್ರ ಓಡೋಡಿ ಬಂದಿದ್ದಾರೆ” ಎಂದು ಕಾಂಗ್ರೆಸ್ ಕಿಚಾಯಿಸಿದೆ.

“>

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!