Friday, September 20, 2024

ಪ್ರಾಯೋಗಿಕ ಆವೃತ್ತಿ

ರಾಹುಲ್ ಗಾಂಧಿ ದೇವಾಲಯ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ಅಸ್ಸಾಂ ಸರ್ಕಾರ: ಕಾಂಗ್ರೆಸ್ ಪ್ರತಿಭಟನೆ

ಅಸ್ಸಾಂ ನ 15ನೇ ಶತಮಾನದ ಸಂತ ಹಾಗೂ ವಿದ್ವಾಂಸ ಶ‍್ರೀಮಂತ ಶಂಕರದೇವರ ಜನ್ಮಸ್ಥಳವಾದ ಬತದ್ರವ ಸತ್ರ ದೇವಾಲಯಕ್ಕೆ ಭೇಟಿ ನೀಡುವುದರಿಂದ ಅಸ್ಸಾಂ ಆಡಳಿತ ನನ್ನನ್ನು ತಡೆದಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಗಾಂವ್‌ನಲ್ಲಿ ಆರೋಪಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತಮ್ಮ ಮೇಲೆ ಹೇರಲಾಗಿರುವ ನಿರ್ಬಂಧಗಳನ್ನು ಪ್ರಶ್ನಿಸಿರುವ ರಾಹುಲ್ ಗಾಂಧಿ, “ನಾವು ದೇವಾಲಯಕ್ಕೆ ಭೇಟಿ ನೀಡಬೇಕಿದೆ. ನಾನು ದೇವಾಲಯಕ್ಕೆ ಭೇಟಿ ನೀಡದಿರಲು ಯಾವ ಅಪರಾಧ ಮಾಡಿದ್ದೇನೆ?”ಎಂದು ಪ್ರಶ್ನಿಸಿದ್ದಾರೆ.

“>

“ನಾವು ಯಾವುದೇ ಸಮಸ್ಯೆಗಳನ್ನು ಸೃಷ್ಟಿಸುವುದಿಲ್ಲ. ನಾವು ಕೇವಲ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲು ಬಯಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಯಾರು ದೇವಾಲಯಕ್ಕೆ ಭೇಟಿ ನೀಡಬೇಕು ಎಂದು ನಿರ್ಧರಿಸಲಿದ್ದಾರೆ. ಕೇವಲ ಓರ್ವ ವ್ಯಕ್ತಿ ಮಾತ್ರ ದೇವಾಲಯವನ್ನು ಪ್ರವೇಶಿಸಬಹುದಾಗಿದೆ ಎಂದೂ ರಾಹುಲ್ ಗಾಂಧಿ ಹೇಳಿದ್ದಾರೆ.

ದೇವಾಲಯ ಭೇಟಿಗೆ ಅವಕಾಶ ನಿರಾಕರಣೆ ಹಿನ್ನೆಲೆ ರಾಹುಲ್ ಗಾಂಧಿ ನಾಗಾಂವ್‌ನಲ್ಲಿ ಧರಣಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

“>

ಹಿಂದೂಸ್ತಾನ್ ಟೈಮ್ಸ್‌ ವರದಿ ಪ್ರಕಾರ, ಇಂದು ಅಯೋಧ್ಯೆ ರಾಮಮಂದಿರದ ಉದ್ಘಾಟನೆ ಪ್ರಯುಕ್ತ ದೇವಸ್ಥಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಗಾಗಿ, ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಕಾರಣಕ್ಕೆ ಇಂದು ದೇವಸ್ಥಾನಕ್ಕೆ ಭೇಟಿ ನೀಡದಂತೆ ರಾಹುಲ್ ಗಾಂಧಿಗೆ ಸೂಚಿಸಲಾಗಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗಲಭೆಯಾಗುವ ಸಾಧ್ಯತೆ ಇರುವುದರಿಂದ ರಾಹುಲ್ ಗಾಂಧಿ ತಮ್ಮ ಭಾರತ್ ಜೋಡೊ ನ್ಯಾಯ ಯಾತ್ರೆಯ ಮಾರ್ಗವನ್ನು ಮರು ಪರಿಶೀಲಿಸಬೇಕು ಎಂದು ಭಾನುವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಆಗ್ರಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!