Saturday, July 13, 2024

ಪ್ರಾಯೋಗಿಕ ಆವೃತ್ತಿ

ದೇವಸ್ಥಾನ ಜೀರ್ಣೋದ್ಧಾರಕ್ಕೆ ಮನ್ಮಲ್ ಅಧ್ಯಕ್ಷ ರಾಮಚಂದ್ರು ನೆರವು

ಮಂಡ್ಯ ತಾಲ್ಲೂಕಿನ ಬಸರಾಳು ಹೋಬಳಿಯ ತಿರುಮಲಾಪುರ ಗ್ರಾಮದ ಶ್ರೀ ಹಳೇ ಊರಮ್ಮ ದೇವಸ್ಥಾನ ಜೀರ್ಣೋದ್ಧಾರಕ್ಕಾಗಿ ಶ್ರೀ ಶಂಭು ಸೇವಾ ಟ್ರಸ್ಟ್ ಮತ್ತು ಮನ್ಮುಲ್ ಅಧ್ಯಕ್ಷ ಬಿ.ಆರ್ ರಾಮಚಂದ್ರು ರವರು ಸಹಾಯಾರ್ಥವಾಗಿ 25,000 ರೂ. ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ರಾಮಚಂದ್ರು, ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ನೀಡುವ ಮೂಲಕ ದೇವರ ಆಶೀರ್ವಾದ ಪಡೆದಿದ್ದೇನೆ.ದೇವಸ್ಥಾನದ ಅಭಿವೃದ್ಧಿಗೆ ಸದಾ ಸ್ಪಂದಿಸುತ್ತೇನೆ ಎಂದು ತಿಳಿಸಿದರು.

ರಾಮಚಂದ್ರು ಅವರಿಗೆ ತಿರುಮಲಾಪುರ ಗ್ರಾಮಸ್ಥರು ಧನ್ಯವಾದ ತಿಳಿಸಿದರು.ಈ ಸಂದರ್ಭದಲ್ಲಿ ಟ್ರಸ್ಟ್ ನ ಕಾರ್ಯದರ್ಶಿ ಬಿ.ಆರ್ ಸುರೇಶ್, ಸುಗಂಧರಾಜು, ಆನಂದ್ , ಶಂಭು ಜವರೇಗೌಡ, ಹಾಗೂ ಯುವಕರು , ಊರಿನ ಗ್ರಾಮಸ್ಥರು ಮತ್ತಿತರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!