Friday, September 20, 2024

ಪ್ರಾಯೋಗಿಕ ಆವೃತ್ತಿ

ಲೋಕಸಭೆ ಚುನಾವಣೆ| ತಾತ್ಕಾಲಿಕ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ

ಲೋಕಸಭೆ ಚುನಾವಣೆ ತಾತ್ಕಾಲಿಕ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಲೋಕಸಭೆ 2024 ರ ಚುನಾವಣೆಯನ್ನು ಏಪ್ರಿಲ್ 16 ರಂದು ತಾತ್ಕಾಲಿಕವಾಗಿ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ಪತ್ರ ಬರೆದಿದೆ.

ಚುನಾವಣಾ ಯೋಜಕರ ಪ್ರಾರಂಭ ಮತ್ತು ಅಂತಿಮ ದಿನಾಂಕಗಳನ್ನು ಲೆಕ್ಕಾಚಾರ ಮಾಡಲು ಚುನಾವಣಾ ಆಯೋಗ ಅಧಿಕಾರಿಗಳಿಗೆ ಅನುವು ಮಾಡಿಕೊಡಲು, ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ಘೋಷಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

2019ರ ಲೋಕಸಭಾ ಚುನಾವಣೆಯು ಏಪ್ರಿಲ್ 11ರಿಂದ ಆರಂಭವಾಗಿ ಮೇ 19ರವರೆಗೆ ನಡೆದಿತ್ತು. ಫಲಿತಾಂಶವು ಮೇ 23ರಂದು ಪ್ರಕಟಗೊಂಡಿತ್ತು. ನಿಗದಿತ ಸಮಯದಲ್ಲಿಯೇ ಚುನಾವಣೆ ನಡೆಯುದಾದರೆ ಫೆಬ್ರವರಿ ಕೊನೆಯ ವಾರ ಅಥವಾ ಮಾರ್ಚ್‌ ಮೊದಲ ವಾರದಲ್ಲಿ 2024ರ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ.

ಕೃಪೆ: ಈದಿನ.ಕಾಂ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!