ಲಾರಿಗೆ ಹಿಂಬದಿಯಿಂದ ಟಿಟಿ ವಾಹನವೊಂದು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ 13 ಜನರು ಮೃತಪಟ್ಟ ದಾರುಣ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ನಲ್ಲಿ ಇಂದು (ಜೂನ್ 28) ಬೆಳಿಗ್ಗೆ ನಡೆದಿದೆ.
ಮೃತರು ಚಿಂಚೊಳ್ಳಿ ಮಾಯಮ್ಮನ ದರ್ಶನಕ್ಕೆಂದು ತೆರಳಿದ್ದರು.ಊರಿಗೆ ಮರಳುತ್ತಿದ್ದಾಗ ಶುಕ್ರವಾರ ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು ಎಂದು ವರದಿಗಳು ಹೇಳಿವೆ.
ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಅಪಘಾತಕ್ಕೀಡಾದ ವಾಹನದಲ್ಲಿದ್ದ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.