Thursday, November 19, 2026

ಪ್ರಾಯೋಗಿಕ ಆವೃತ್ತಿ

ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಿ : ಮಧು ಜಿ.ಮಾದೇಗೌಡ

ಸ್ಪರ್ಧಾತ್ಮಕ ಯುಗದಲ್ಲಿರುವ ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಆದ್ಯತೆ ನೀಡಬೇಕೆಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಸಲಹೆ ನೀಡಿದರು.

ಮಂಡ್ಯ ನಗರದ ಲಕ್ಷ್ಮಿಜನಾರ್ಧನ ಶಿಕ್ಷಣ ಸಮಿತಿ ಟ್ರಸ್ಟ್ ಶಾಲಾವರಣದಲ್ಲಿ ಆಯೋಜಿಸಿದ್ದ ಶಾಲಾ ಮತ್ತು ಕಾಲೇಜು ವಾರ್ಷಿಕೋತ್ಸವ ಹಾಗೂ ಪೋಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯಾವಾಗಲೂ ಓದುವುದೊಂದೇ ಮುಖ್ಯವಲ್ಲ. ಪಠ್ಯದೊಂದಿಗೆ ಕ್ರೀಡೆ,ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು.ಕೌಶಲ್ಯ ಜ್ಞಾನ ವೃದ್ದಿಸಿಕೊಳ್ಳಬೇಕಿದೆ. ಅತಿ ಓದುವುದು ಮಂಕು ಕವಿಸುತ್ತದೆ. ಹೊಸ ಹೊಸ ಚಿಂತನೆಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಿದೆ. ಶಾಲಾ-ಕಾಲೇಜಿನ ಜೀವನ ಮತ್ತೆ ಸಿಗುವುದಿಲ್ಲ, ನನ್ನಂತಹ ವಯಸ್ಸಿನವರು ಶಾಲೆ-ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿ ಕಲಿಯಲು ಸಾಧ್ಯವಿಲ್ಲ, ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವುದೇ ಜಾಣತನ ಎಂದು ನುಡಿದರು.

ಇದೇ ಸಂಧರ್ಭದಲ್ಲಿ ಶಾಲಾ ಕಾಲೇಜು ಪ್ರತಿಭಾವಂತ ವಿದ್ಯಾರ್ಥಿನಿಯರ ಸಾಹಿತ್ಯ-ಸಾಂಸ್ಕೃತಿಕ, ಕ್ರೀಡೆ, ಸಾಧನೆ ಕುರಿತ ಕೌಸ್ತುಭ ಸಂಚಿಕೆಯನ್ನು ಗಣ್ಯರು ಲೋಕಾರ್ಪಣೆಗೊಳಿಸಿದರು. ಬಳಿಕ ಶಾಲಾ -ಕಾಲೇಜಿನ ವಿದ್ಯಾರ್ಥಿನಿಯರು ಸಾಂಸ್ಕೃತಿಕ ಮತ್ತು ಪ್ರತಿಭಾ ಅನಾವರಣ ಕಾರ್ಯಕ್ರಮವು ಯಶಸ್ಸಿಯಾಗಿ ನಡೆಯಿತು. ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಲಕ್ಷ್ಮಿಜನಾರ್ಧನ ಶಿಕ್ಷಣ ಸಮಿತಿ ಟ್ರಸ್ಟ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಸ್.ಟಿ.ಜವರೇಗೌಡ, ಸಾಹಿತಿ ಡಾ.ಪ್ರದೀಪ್ ಕುಮಾರ್ ಹೆಬ್ರಿ, ಟ್ರಸ್ಟಿ ಡಾ.ಸುರೇಶ್, ಕೆಪಿಸಿಸಿ ಸದಸ್ಯ ಅಶೋಕ್, ಡಾ.ಗೋಪಾಲಕೃಷ್ಣ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು, ಶಿಕ್ಷಕ ವೃಂದ ಪಾಲ್ಗೊಂಡಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ