Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕ್ಷೇತ್ರದ ಮತದಾರರು, ‘ಕೈ’ ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಿಸಿದ ಸ್ಟಾರ್ ಚಂದ್ರು

2024ರ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ 5 ಲಕ್ಷಕ್ಕೂ ಅಧಿಕ ಮತದಾರರು ನನ್ನ ಪರವಾಗಿ ಮತ ಚಲಾಯಿಸಿರುವುದು ಮಂಡ್ಯ ಲೋಕಸಭಾ ಕ್ಷೇತ್ರದ ಜನತೆ ನನ್ನ ಮೇಲಿಟ್ಟಿರುವ ಪ್ರೀತಿ ವಿಶ್ವಾಸಕ್ಕೆ ಸಾಕ್ಷಿಯಾಗಿದೆ. ಅತಿ ಕಡಿಮೆ ಅವಧಿಯಲ್ಲಿ ಲಕ್ಷಾಂತರ ಜನರ ವಿಶ್ವಾಸ ಗಳಿಸಿರುವುದು ನನಗೆ ಹೆಮ್ಮೆ ಎನಿಸಿದೆ. ಮತದಾರರು ನೀಡಿದ ತೀರ್ಪಿಗೆ ತಲೆಬಾಗುತ್ತೇನೆ ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು)  ಅವರು ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದ ಎಲ್ಲಾ ನನ್ನ ಮತದಾರ ಬಂಧುಗಳು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಪಕ್ಷದ ಮುಖಂಡರು,  ಕಾರ್ಯರ್ಕತರೆಲ್ಲರಿಗೂ ನನ್ನ ಹೃದಯದ ಪೂರ್ವಕ ಅಭಿನಂದನೆಗಳು. ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯಸ್ವಾಮಿ, ಕ್ಷೇತ್ರದ ಶಾಸಕರಿಗೆ ಧನ್ಯವಾದಗಳು ಎಂದು ಸ್ಟಾರ್ ಚಂದ್ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚುನಾವಣೆಯಲ್ಲಿ ಹಗಲಿರುಳು ಶ್ರಮಿಸಿದ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ತಿಳಿಸುತ್ತೇನೆ. ಜಿಲ್ಲೆಯ ಜನತೆ ನನ್ನ ಮೇಲಿಟ್ಟಿರುವ ಪ್ರೀತಿ, ವಿಶ್ವಾಸ ಹೀಗೆಯೇ ಮುಂದುವರಿಯಲಿ. ಚುನಾವಣೆಯಲ್ಲಿ ಪ್ರತ್ಯಕ್ಷ, ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳನ್ನು ತಿಳಿಸುತ್ತೇನೆಂದು ಸ್ಟಾರ್ ಚಂದ್ರು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ