Saturday, May 18, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದೆ

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಮೂಲಕ ಸರ್ವರಿಗೂ ಶಿಕ್ಷಣ ನೀಡುವ ಮೂಲಕ ಶಿಕ್ಷಣ ಕ್ರಾಂತಿ ಮಾಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಅಭಿಪ್ರಾಯ ವ್ಯಕ್ತಪಡಿಸಿದರು.

ಮದ್ದೂರು ತಾಲೂಕಿನ ಕೆ. ಹೊನ್ನಲಗೆರೆ ಆರ್.ಕೆ. ವಿದ್ಯಾ ಸಂಸ್ಥೆಯ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶಿಷ್ಟವಾಗಿ ದಕ್ಷಿಣ ಪದವೀಧರ ಕ್ಷೇತ್ರದ ಅಭ್ಯರ್ಥಿ ರವಿಶಂಕರ್ ಪರ ಮತಯಾಚನೆ ನಡೆಸಿದರು.

ಉತ್ತಮ ಸಮಾಜ ನಿರ್ಮಾಣವಾಗುವ ಜತೆಗೆ ಸದೃಢ ಪ್ರಜೆಗಳಾಗಲು ಶಿಕ್ಷಣ ಅತ್ಯವಶ್ಯಕವಾಗಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಬಿಜೆಪಿ ಸರ್ಕಾರ ಹಲವು ಆಶಯಗಳನ್ನು ಅನುಷ್ಠಾನಗೊಳಿಸಿ ಪ್ರಬುದ್ಧ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಿದೆ ಎಂದರು.

ಈ ಹಿಂದೆ ಅಧಿಕಾರ ನಡೆಸಿದ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರಗಳು ಯಾವುದೇ ಯೋಜನೆಗಳನ್ನು ಅನುಷ್ಠಾನಗೊಳಿಸದೆ ನಿರ್ಲಕ್ಷ್ಯ ವಹಿಸಿದ ಉದಾಹರಣೆಗಳು ಸಾಕಷ್ಟಿದೆ. ಪದವೀಧರರು ಇದನ್ನರಿತು ಬಿಜೆಪಿ ಅಭ್ಯರ್ಥಿ ಮೈ. ವಿ. ರವಿಶಂಕರ್ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವುದರ ಮೂಲಕ ಹೆಚ್ಚಿನ ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿನಯ್ ರಾಮಕೃಷ್ಣ ಮಾತನಾಡಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಲವಾರು ಯೋಜನೆಗಳನ್ನು ಕೈಗೊಂಡಿದ್ದು, ಇದರಿಂದಾಗಿ ಹಲವು ಸಾಧನೆಗಳನ್ನು ಮಾಡಲು ಕಾರಣವಾಗಿದೆ.

ವೈದ್ಯಕೀಯ ಶಿಕ್ಷಣ ಸಚಿವರಾಗಿರುವ ಅಶ್ವತ್ಥ್ ನಾರಾಯಣ್ ಅವರು ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇದರಿಂದಾಗಿ ಗ್ರಾಮೀಣ ಭಾಗದ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಗಿದೆ ಎಂದರು.

ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಉಮೇಶ್, ತಾಲೂಕು ಅಧ್ಯಕ್ಷ ರಘು, ಮನ್ ಮುಲ್ ನಿರ್ದೇಶಕ ಎಸ್. ಪಿ. ಸ್ವಾಮಿ, ಬಿಜೆಪಿ ಮಹಿಳಾ ನಾಯಕಿ ಲಕ್ಷ್ಮಿ ಅಶ್ವಿನ್ ಗೌಡ. ಮಹಿಳಾ ಅಧ್ಯಕ್ಷೆ ಶ್ವೇತಾ, ಯುವ ಅಧ್ಯಕ್ಷ ಸುನಿಲ್,ಕೆ ಸ್ವಾಮಿ, ಶಾಲಾ ಶಿಕ್ಷಕರು ಆಡಳಿತಮಂಡಳಿಯವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!