Thursday, July 25, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಹಳ್ಳಕ್ಕೆ ಉರುಳಿದ ಬಸ್ಸು : ಚಾಲಕನಿಗೆ ಕಾಲು ಮುರಿತ

ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್’ಟಿಸಿ ಬಸ್ಸೊಂದು ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿಯ ಸರ್ವಿಸ್ ರಸ್ತೆಯ ಪಕ್ಕ ಹಳ್ಳಕ್ಕೆ ಉರುಳಿದ ಪರಿಣಾಮ ಬಸ್ ಚಾಲಕ ಕಾಲು ಮುರಿತವಾಗಿರುವ ಘಟನೆ ಮಂಡ್ಯ ತಾಲ್ಲೂಕಿನ ರಾಗಿಮುದ್ದನಹಳ್ಳಿ ಬಳಿ ಗುರುವಾರ ನಡೆದಿದೆ.

ಈ ಘಟನೆಯಲ್ಲಿ ನಾಲ್ಕೈದು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲದೇ ಕಾರು ಸೇರಿದಂತೆ ಮೂರ್‍ನಾಲ್ಕು ಸ್ಕೂಟರ್ ಗಳು ಜಖಂಗೊಂಡಿವೆ.

ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!