Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮರಕುಂಬಿ ಪ್ರಕರಣ | ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಜನರಿಗೆ ಜಾಮೀನು

ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ 97 ಜನರಿಗೆ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.

ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಜನರಿಗೆ ಕೊಪ್ಪಳ ಜಿಲ್ಲಾ ನ್ಯಾಯಾಲಯ ಇತ್ತೀಚೆಗೆ ಜೀವಾವಧಿ ಶಿಕ್ಷೆ ನೀಡಿ ಆದೇಶಿಸಿತ್ತು. ಬಳಿಕ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಆರೋಪಿತರು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆರೋಪಿತರ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ ಹರೀಶಗೌಡ ಮತ್ತು ಶಿವಲಿಂಗೇಗೌಡ ಅವರನ್ನೊಳಗೊಂಡ ಪೀಠವು, ಆರೋಪಿತರಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ.

ಆರೋಪಿತರ ಪರವಾಗಿ ಅವಿನಾಶ ಅಂಗಡಿ, ನೀಲೇಂದ್ರ ಗುಂಡೆ, ಸಂತೋಷ ಮಲಗೌಡರ, ವಿ.ಎಂ.ಶೀಲವಂತ, ಆನಂದ ಕೊಳ್ಳಿ, ಈರಣ್ಣ ಕಬ್ಬೂರ ಇತರ ವಕೀಲರು ವಾದ ಮಂಡಿಸಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ