Tuesday, November 24, 2026

ಪ್ರಾಯೋಗಿಕ ಆವೃತ್ತಿ

ದೇಶದ ಮೊದಲ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಆಜಾದ್

ಮೌಲಾನಾ ಅಬುಲ್ ಕಲಾಂ ಆಜಾದ್ ಜನ್ಮ ವಾರ್ಷಿಕೋತ್ಸವವನ್ನು ನಾವು ನವೆಂಬರ್ 11 ಶುಕ್ರವಾರದಂದು ಆಚರಿಸುತ್ತೇವೆ. ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಭಾರತದ ಮೊದಲ ಶಿಕ್ಷಣ ಮಂತ್ರಿ, ಅಲ್ಲದೇ ಅಪಾರ ಪಾಂಡಿತ್ಯವನ್ನು ಕಳಿಸಿಕೊಂಡಿದ್ದ ವ್ಯಕ್ತಿಯಾಗಿದ್ದರು.

ಮೌಲಾನಾ ಆಜಾದ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಅಬುಲ್ ಕಲಾಂ ಗುಲಾಮ್ ಮುಹಿಯುದ್ದೀನ್ ಅವರು ಶಿಕ್ಷಣ ತಜ್ಞ ಮತ್ತು ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಅವರು 11 ನವೆಂಬರ್ 1888 ರಂದು ಜನಿಸಿದರು.

ಅವರ ಜನ್ಮ ದಿನಾಚರಣೆಯನ್ನು ಆಚರಿಸಲು ನಾವು ಸಜ್ಜಾಗುವಾಗ, ನಾವು ಅವರ ಬೋಧನೆಗಳನ್ನು ನೆನಪಿಸಿಕೊಳ್ಳಬೇಕು. ಸ್ವಾತಂತ್ರ್ಯಾನಂತರ ದೇಶ ಅನಕ್ಷರತೆಯಿಂದ ನರಳುತ್ತಿದ್ದಾಗ ಶಿಕ್ಷಣ ಕ್ಷೇತ್ರವನ್ನು ಬಲಿಷ್ಠಗೊಳಿಸಿದ ಕೀರ್ತಿ ಅವರದು.

ಅಬುಲ್ ಕಲಾಂ ಗುಲಾಮ್ ಮುಹಿಯುದ್ದೀನ್ ಅವರು, ಭಾರತದ ಇತರ ವಿಶ್ವವಿದ್ಯಾನಿಲಯಗಳೊಂದಿಗೆ ಮೊದಲ ಐಐಟಿಯನ್ನು ಸ್ಥಾಪಿಸಿದ ವ್ಯಕ್ತಿಯಾಗಿದ್ದಾರೆ. MHRD ಅಡಿಯಲ್ಲಿ ವಿಶ್ವವಿದ್ಯಾನಿಲಯ ಅನುದಾನ ಆಯೋಗವನ್ನು (UGC) ಸ್ಥಾಪಿಸುವಲ್ಲಿ ಅವರು ಬಹಳ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ