Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಹುಕ್ಕಾ ಬಾರ್ ಗೆ ಅನಧಿಕೃತ ಲೈಸೆನ್ಸ್ ; ಪಿಡಿಓಗೆ ಜಿಲ್ಲಾಧಿಕಾರಿ ತರಾಟೆ

ಮಂಡ್ಯ ತಾಲ್ಲೂಕಿನ ಬೂದನೂರು ಗ್ರಾಮದ ಬಳಿ ಅತ್ಯಕ್ರಾಂತವಾಗದ ಜಮೀನಿನಲ್ಲಿ ಹುಕ್ಕಾ ಬಾರ್ ನಡೆಸಲು ಅನಧಿಕೃತ ಲೈಸೆನ್ಸ್ ನೀಡಿದ ಪಿಡಿಓ ವಿನಯ್ ಕುಮಾರ್ ಅವರನ್ನು ಜಿಲ್ಲಾಧಿಕಾರಿ ಡಾ.ಕುಮಾರ್ ತರಾಟೆಗೆ ತೆಗೆದುಕೊಂಡರು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸೋಮವಾರ ಸಂಜೆ ನಡೆದ ಬೆಟ್ಟಿಂಗ್ ದಂಧೆ ಕುರಿತ ತುರ್ತು ಸಭೆಯಲ್ಲಿ ಈ ಘಟನೆ ನಡೆಯಿತು.

ಹುಕ್ಕಾ ಬಾರ್ ನಡೆಸುತ್ತಿರುವ ಬಗ್ಗೆ ವಿವಿಧ ಪ್ರಗತಿಪರ ಸಂಘಟನೆಗಳು ಗಮನ ಸೆಳೆದಾಗ, ಪಿಡಿಓ ಅವರನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ, ಅನ್ಯಕ್ರಾಂತವಾಗದ ಜಮೀನಿಗೆ ಹೇಗೆ ಲೈಸೆನ್ಸ್ ನೀಡಿದ್ದೀರಿ, ಇದು ನಿಮಗೆ ಗೊತ್ತಿಲ್ಲವೇ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೇ ಇಂತಹ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ