Friday, November 20, 2026

ಪ್ರಾಯೋಗಿಕ ಆವೃತ್ತಿ

ದೇಹಕ್ಕೆ ದಿವ್ಯ ಔಷಧಿ ಕ್ರೀಡೆ: ಎಚ್.ಎಸ್. ಮಂಜು

ಕ್ರೀಡೆಯಿಂದ ದೈಹಿಕ-ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ದೇಹಕ್ಕೆ ದಿವ್ಯ ಔಷಧ ಕ್ರೀಡೆ ಎಂದು ನಗರಸಭೆ ಅಧ್ಯಕ್ಷ ಎಚ್.ಎಸ್. ಮಂಜು ಅಭಿಪ್ರಾಯ ಪಟ್ಟರು.

ಮಂಡ್ಯ ನಗರದ ಸರ್.ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಮೈಸೂರು ದಸರಾ ವಿವಾಗ ಮಟ್ಟದ ಕ್ರೀಡಾಕೂಟದಲ್ಲಿ ಎಂಟು ವಿಭಾಗದ ಆಟಗಾರರು ಪಾಲ್ಗೊಂಡಿದ್ದಾರೆ. ಆಟಗಾರರು ನ್ಯಾಯಬದ್ಧವಾಗಿ ಆಟ ಆಡುವ ಮೂಲಕ ಕ್ರೀಡಾ ಮನೋಭಾವಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಕ್ರೀಡಾ ಸಚಿವರಾದ ನಾರಾಯಣಗೌಡರು 10 ಕೋಟಿ ವೆಚ್ಚದಲ್ಲಿ ಸರ್ ಎಂ ವಿ ಕ್ರೀಡಾಂಗಣ ನವೀಕರಣಕ್ಕೆ ಚಾಲನೆ ನೀಡಿದ್ದು ಸಂತಸ ತಂದಿದೆ ಎಂದರು.

ಕಳೆದ 18-20 ವರ್ಷಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿರಲಿಲ್ಲ. ಈಗ ಮಂಡ್ಯ ಜಿಲ್ಲೆಗೆ 16 ಕೋಟಿ ರೂ.ಅನುದಾನ ಕ್ರೀಡಾ ಸಚಿವರಾದ ನಾರಾಯಣ ಗೌಡರು ನೀಡಿದ್ದಾರೆ. ಒಳಾಂಗಣ ಕ್ರೀಡಾಂಗಣದಲ್ಲಿ ಜಿಮ್ ಸೇರಿದಂತೆ ವಿವಿಧ ಆಟೋಟಗಳಿಗೆ ಅವಕಾಶ ಮಾಡಿ ಕೊಡಲಾಗಿದ್ದು ಕ್ರೀಡಾಸಕ್ತರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕ್ರೀಡಾ ಮನೋಭಾವದಿಂದ ಯಶಸ್ಸು ಜಿಲ್ಲಾ ಪಂಚಾಯತ್ ಮುಖ್ಯ ಅಧಿಕಾರಿ ಶಾಂತಾ ಹುಲ್ಮನಿ ಮಾತನಾಡಿ, ನಾನು ಸಹ ಕ್ರೀಡಾಪಟುವಾಗಿದ್ದು ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಸಾಕಷ್ಟು ಬಹುಮಾನ ಪಡೆದಿದ್ದೇನೆ. ನಾನು ಮನೆಗೆ ಹೋದಾಗ ಈ ಪ್ರಶಸ್ತಿಗಳನ್ನು ನೋಡಿದಾಗ ನನಗೆ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು,ಬಹುಮಾನ ಪಡೆದದ್ದೆಲ್ಲ ನೆನಪಾಗುತ್ತದೆ ಎಂದರು.

ಕ್ರೀಡೆ ಮನುಷ್ಯನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸೋಲು- ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸಿ, ಕ್ರೀಡಾ ಮನೋಭಾವದಿಂದ ನಡೆದರೆ ಯಶಸ್ಸು ಸಾಧ್ಯ.

ಕ್ರೀಡಾ ಸಚಿವರಾದ ಕೆ.ಸಿ.ನಾರಾಯಣಗೌಡರು 10 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ನವೀಕರಣಕ್ಕೆ ಚಾಲನೆ ನೀಡಿದ್ದು ಅವರಿಗೆ ಜಿಲ್ಲಾ ಪಂಚಾಯತ್ ವತಿಯಿಂದ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಸಹಾಯಕ ನಿರ್ದೇಶಕರಾದ ಓಂ ಪ್ರಕಾಶ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ವಿಜಯಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ