Friday, September 20, 2024

ಪ್ರಾಯೋಗಿಕ ಆವೃತ್ತಿ

ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲು

ಕಾಂಗ್ರೆಸ್ ಪಕ್ಷ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲು ಆಗಿತ್ತು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಸಿದ್ದರಾಮಯ್ಯ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿಯಿಂದ ಮೊಟ್ಟ ಮೊದಲ ಬಾರಿಗೆ ಕಾಂಗ್ರೆಸ್ಸೇತರ ಸರ್ಕಾರ ರಚನೆಗೆ ಕಾರಣವಾಯಿತು.

ತುರ್ತು ಪರಿಸ್ಥಿತಿ ವಿರುದ್ಧ ಜಯಪ್ರಕಾಶ್ ನಾರಾಯಣ್ ನೇತೃತ್ವದಲ್ಲಿ ವಿರೋಧ ಪಕ್ಷಗಳೆಲ್ಲವೂ ಕಾಂಗ್ರೆಸ್ ವಿರುದ್ಧ ಒಂದಾಗಿ ಜನತಾ ಪಕ್ಷವನ್ನು ರಚಿಸಿಕೊಂಡು ಚುನಾವಣಾ ಹೋರಾಟಕ್ಕೆ ಇಳಿದಿದ್ದವು.

ಅಂದು ಪ್ರಧಾನಿಯಾಗಿದ್ದ ಇಂದಿರಾಗಾಂಧಿಯವರು ಜಾರಿಗೊಳಿಸಿದ ತುರ್ತು ಪರಿಸ್ಥಿತಿಯಿಂದ ರೋಸಿಹೋದ ಜನರು ಜನತಾ ಪಕ್ಷವನ್ನು ಬೆಂಬ ಲಿಸಿದರು. ಅಂದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟ ಶಕ್ತಿಗಳ ವಿರುದ್ಧ ಹೋರಾಡಿದ ವೀರಗಾಥೆ ಇಂದಿಗೂ ಸ್ಮರಣೀಯ ಎಂದರು.

21 ತಿಂಗಳ ಕಾಲ ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯಿತು. ಸಂಘರ್ಷಗಳೊಡನೆ ಬ್ರಿಟೀಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ಗಳಿಸಿದ್ದ ಈ ಮಣ್ಣಿನಲ್ಲಿ ಮತ್ತೆ ಅಂತಹುದ್ದೆ ಹೋರಾಟಕ್ಕೆ ತುರ್ತು ಪರಿಸ್ಥಿತಿ ಕಾರಣವಾಗಿತ್ತು. ಈ ಕರಾಳ ಆಡಳಿತದ ವಿರುದ್ಧ ವಿರೋಧ ಪಕ್ಷಗಳ ನಾಯಕರು ದೊಡ್ಡ ಸಂಘರ್ಷವನ್ನೇ ನಡೆಸಿದರು ಎಂದರು.

ದೇಶದ ಪ್ರತಿಯೊಬ್ಬರೂ ಈ ಹೋರಾಟದ ಕ್ಷಣವನ್ನು ಅರಿಯ ಬೇಕು. ಅಂದು ತಮ್ಮ ಜೀವವನ್ನೇ ಲೆಕ್ಕಿಸದೆ ಹೋರಾಡಿದ ವರನ್ನು ಸ್ಮರಿಸುವುದು ಎಲ್ಲರ ಕರ್ತವ್ಯವಾಗಿದೆ. ಇದು ನಮ್ಮ ಸಾಮಾಜಿಕ ಜೀವನಕ್ಕೆ ಪ್ರೇರಣೆ ಕೊಡುವ ಅಂಶವಾಗಿದ್ದು, ಕರಾಳ ನೆನಪಿನ ಇತಿಹಾಸವನ್ನು ಅರಿತು ಹೊಸದೊಂದು ಇತಿಹಾಸವನ್ನು ನಿರ್ಮಿಸಲು ಎಲ್ಲರೂ ಪಣತೊಡಬೇಕು ಎಂದು ತಿಳಿಸಿದರು.

ತುರ್ತುಪರಿಸ್ಥಿತಿಯಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರು ತಮ್ಮ ವಿರೋಧಿಗಳನ್ನು ಮಟ್ಟ ಹಾಕಲು ಎಲ್ಲರನ್ನೂ ಜೈಲಿಗೆ ಕಳುಹಿಸಿದರು. ಇದರಲ್ಲಿ ಬಿಜೆಪಿ ಮುಖಂಡರಾದ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ, ಮದುದಂಡವತೆ, ಮಧುಲಿಮಯೆ, ರಾಮಾ ಜೋಯಿಸ್, ಕೆ.ಎಸ್. ಹೆಗ್ಡೆ ಸೇರಿದಂತೆ ಹಲವರನ್ನು 18 ತಿಂಗಳ ಕಾಲ ಜೈಲಿನಲ್ಲಿ ಇರಿಸಲಾಗಿತ್ತು.

ಆದರೆ, ಇಂದು ಭ್ರಷ್ಟಾಚಾರದಲ್ಲಿ ನಿರತರಾಗಿ ದೇಶದ ಆಸ್ತಿಯನ್ನು ಲಪಟಾಯಿಸಲು ಹೊರಟವರ ವಿರುದ್ಧ ತನಿಖೆ ನಡೆಸಿದರೆ ಕಾಂಗ್ರೆಸ್ಸಿಗರು ದೇಶಾದ್ಯಂತ ಗೊಂದಲ ಮೂಡಿಸಿ ಪ್ರತಿಭಟನೆಯ ಹಾದಿ ಹಿಡಿಯುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ವಿವೇಕ್, ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್, ನಾಗಾನಂದ್, ಕೃಷ್ಣ ಅಂಕಪ್ಪ, ಬಸವರಾಜು ಗೋಷ್ಠಿಯಲ್ಲಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!