Thursday, September 19, 2024

ಪ್ರಾಯೋಗಿಕ ಆವೃತ್ತಿ

ಬೆಂಗಳೂರು| ನ.27ಕ್ಕೆ ಮುಖ್ಯಮಂತ್ರಿಗಳಿಂದ ಇಡೀ ದಿನ ಜನತಾದರ್ಶನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ (ನ. 27) ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಒಂದು ದಿನ ಪೂರ್ತಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಈ ಕುರಿತು ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿಯೂ ಮಾಹಿತಿ ನೀಡಿದ್ದು, “ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಗೃಹ ಕಚೇರಿ ಕೃಷ್ಣಾದಲ್ಲಿ ನವೆಂಬರ್ 27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ. ಜನತಾ ದರ್ಶನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿ ತರಲು ಕೋರಲಾಗಿದೆ” ಎಂದು ತಿಳಿಸಿದೆ.

ಜನತಾ ದರ್ಶನದ ಬಗ್ಗೆ ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿಗಳು ಈಗಾಗಲೇ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಪತ್ರ ಬರೆದಿದ್ದಾರೆ. ಜನತಾ ದರ್ಶನದ ವೇಳೆಯೇ ಸಿಎಂ ಜಿಲ್ಲಾ, ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸಮಸ್ಯೆ ನಿವಾರಣೆಗೆ ಸೂಚನೆ ನೀಡುವ ಸಾಧ್ಯತೆ ಇದೆ. ಹೀಗಾಗಿ ನವೆಂಬರ್ 27ರಂದು ಎಲ್ಲ ಅಧಿಕಾರಿಗಳು ಕಚೇರಿಗಳಲ್ಲಿ ಕಡ್ಡಾಯವಾಗಿ ಇರಬೇಕು ಎಂದು ಸೂಚನೆ ನೀಡಲಾಗಿದೆ.

ಜನತಾ ದರ್ಶನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿ ತರಲು ಕೋರಲಾಗಿದೆ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!