Thursday, October 24, 2024

ಪ್ರಾಯೋಗಿಕ ಆವೃತ್ತಿ

ಬೆಂಗಳೂರು ದೊಡ್ಡ ನಗರವಾಗಲು ಕೆಂಪೇಗೌಡರು ಕಾರಣ: ನರೇಂದ್ರಸ್ವಾಮಿ

ನಾಡಪ್ರಭು ಕೆಂಪೇಗೌಡರ ದೂರದೃಷ್ಠಿಯ ಫಲದಿಂದಲೇ ಬೆಂಗಳೂರು ಇಷ್ಟೊಂದು ದೊಡ್ಡ ನಗರವಾಗಿ ಬೆಳೆಯಲು ಕಾರಣವಾಗಿದೆ ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಳವಳ್ಳಿ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ರವರ 515 ನೇ ಜಯಂತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲಾ ಸಮುದಾಯದವರಿಗೆ ಉದ್ಯೋಗ ಹಾಗೂ ಮಾರುಕಟ್ಟೆ ಕಲ್ಪಿಸಬೇಕೆಂಬ ಉದ್ದೇಶದಿಂದ ಹಲವು ಪೇಟೆಗಳನ್ನು ನಿರ್ಮಿಸಿದರು. ಕೆಂಪೇಗೌಡರ ಅದರ್ಶ ಗುಣಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕೆಂದರು.

ಶಿಕ್ಷಣ ಇಲಾಖೆಯ ಸಿದ್ದರಾಜು ಮಾತನಾಡಿ, ನಾಡಪ್ರಭು ಕೆಂಪೇಗೌಡರು ಕೆರೆ ಕಟ್ಟೆಗಳ ನಿಮಾ೯ಣಕ್ಕೆ ಹೆಚ್ಚು ಒತ್ತು ನೀಡಿದರು. ದೊಡ್ಡ ನಗರವನ್ನಾಗಿ ಸ್ಥಾಪಿಸಿ ಎಲ್ಲಾ ಸಮುದಾಯದ ಜನರ ಹಿತ ಕಾಯುವಲ್ಲಿ ಬದ್ದರಾಗಿದ್ದರು. ಅವರ ಅಪಾರ ಸಾಧನೆ ಮತ್ತು ಸೇವೆಯಿಂದಾಗಿ ಕೆಂಪೇಗೌಡರು ಎಂದೆಂದಿಗೂ ಜೀವಂತವಾಗಿರುತ್ತಾರೆಂದು ಹೇಳಿದರು.

ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರು ಹಾಗೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಲೋಕೇಶ್, ಡಿವೈಎಸ್ಪಿ ಕೃಷ್ಣಪ್ಪ  ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುನ್ನಾ ನಾಡ ಪ್ರಭು ಕೆಂಪೇಗೌಡರ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಪ್ರತಿಷ್ಠಾಪಿಸಿ ಜಾನಪದ ಕಲಾ ಮೇಳದೊಂದಿಗೆ ಮೆರವಣಿಗೆ ನಡೆಸಲಾಯಿತು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!