Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಬೆಂಕಿ ಆಕಸ್ಮಿಕಕ್ಕೆ ಮನೆ ಸಂಪೂರ್ಣ ಭಸ್ಮ

ಆಕಸ್ಮಿಕ ಬೆಂಕಿಗೆ ಮನೆಯೊಂದು ಹೊತ್ತಿ ಉರಿದು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಮಂಡ್ಯದ ಚಾಮುಂಡೇಶ್ವರಿ ನಗರದಲ್ಲಿ ಶುಕ್ರವಾರ ನಡೆದಿದೆ.

ಚ ಎಂಬುವವರಿಗೆ ಸೇರಿದ ಮನೆ ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ಶುಕ್ರವಾರ ಮಧ್ಯಾಹ್ನ 1.30 ಗಂಟೆ ಸುಮಾರಿನಲ್ಲಿ ಮನೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೊದಲು ಮನೆಯಲ್ಲಿದ್ದ ಸಿಲಿಂಡರ್ ಸ್ಪೋಟಗೊಂಡಿದೆ. ನಂತರ ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ಎಲ್ಲ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ.

ಬೆಳಿಗ್ಗೆ 11 ಗಂಟೆಯಲ್ಲಿ ಕುಟುಂಬದ ಎಲ್ಲರೂ ಪೂಜೆ ಮಾಡಿ, ಮನೆಯಿಂದ ತೆರಳಿದ ಬಳಿಕ ಈ ದುರ್ಘಟನೆ ಜರುಗಿದೆ. ಮನೆಯಲ್ಲಿ ಯಾರು ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ಘಟನೆ ಕುರಿತು ಮಂಡ್ಯ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!