ನಾಡಪ್ರಭು ಕೆಂಪೇಗೌಡರ ಜಯಂತ್ಯೋತ್ಸವವನ್ನು ಜಿಲ್ಲೆಯ ಎಲ್ಲ ಸಮುದಾಯದ ಸಂಘ ಟನೆಗಳು, ಜಿಲ್ಲಾಡಳಿ ತದೊಂದಿಗೆ ಜೂ.27ರಂದು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ಜಿ.ಎ. ರಮೇಶ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದವರೆಗೆ ನಾಡಪ್ರಭು ಕೆಂಪೇಗೌಡರ ಭಾವಚಿತ್ರವನ್ನು ಹಲವು ಜನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಗುವುದು.
ಮೆರವಣಿಗೆಯಲ್ಲಿ ಜಿಲ್ಲೆಯ ಎಲ್ಲ ಸಮುದಾಯದ ಮುಖಂಡರು, ಆಟೋ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ, ಬಸ್ ಮಾಲೀಕರ ಸಂಘ, ವರ್ತಕರ ಸಂಘ, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ಜಿಲ್ಲೆಯ ಇನ್ನಿತರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕಲಾಮಂದಿರದಲ್ಲಿ ನಡೆಯುವ ಕಾರ್ಯಕ್ರಮದ ಸಾನಿಧ್ಯವನ್ನು ಆದಿಚುಂಚ ನಗಿರಿ ಶಾಖಾಮಠದ ಶ್ರೀ ಪುರುಷೋತ್ತಮಾ ನಂದನಾಥ ಸ್ವಾಮೀಜಿ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಕಾರ್ಯಕ್ರಮ ಉದ್ಘಾಟಿಸುವರು ಎಂದು ತಿಳಿಸಿದರು.
ಕ್ರೀಡಾ ಸಚಿವ ಕೆ.ಸಿ.ನಾರಾ ಯಣಗೌಡ ಘನ ಉಪಸ್ಥಿತಿಯಲ್ಲಿ ಶಾಸಕ ಎಂ. ಶ್ರೀನಿವಾಸ್ ಕಾ ರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಮರಿತಿಬ್ಬೇಗೌಡ, ಡಿ.ಸಿ. ತಮ್ಮಣ್ಣ, ಸಿ.ಎಸ್. ಪುಟ್ಟರಾಜು, ಕೆ.ಟಿ. ಶ್ರೀಕಂಠೇಗೌಡ, ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ. ಕೆ. ಅನ್ನದಾನಿ, ದಿನೇಶ್ ಗೂಳಿಗೌಡ, ನಗರಸಭಾಧ್ಯಕ್ಷ ಎಚ್.ಎಸ್. ಮಂಜು, ಉಪಾಧ್ಯಕ್ಷೆ ಇಷ್ರತ್ ಫಾತಿಮಾ, ಮುಡಾ ಅಧ್ಯಕ್ಷ ಕೆ. ಶ್ರೀನಿವಾಸ್, ಮೈಷುಗರ್ ಅಧ್ಯಕ್ಷ ಜೆ. ಶಿವಲಿಂಗೇಗೌಡ, ಕಾಡಾ ಅಧ್ಯಕ್ಷ ಎನ್. ಶಿವಲಿಂಗಯ್ಯ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಶೇಷ ಆಯುಕ್ತ ಡಾ. ವಿ. ರಾಮ್‌ಪ್ರಸಾತ್ ಮನೋಹರ್ ಭಾಗವಹಿಸಲಿದ್ದಾರೆ ಎಂದರು.
ಶಂಕರೇಗೌಡ ಶಿಕ್ಷಣ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಎಸ್.ಬಿ. ಶಂಕರಗೌಡ ಉಪನ್ಯಾಸ ನೀಡಲಿದ್ದು, ನಿವೃತ್ತ ವೈದ್ಯಾಧಿಕಾರಿ ಕೆ.ಎಂ. ಶಿವಕುಮಾರ್, ನಿವೃತ್ತ ಕಾರ್ಯಪಾಲಕ ಅಭಿಯಂತರ ಹೊನ್ನರಾ ಜೇಗೌಡ, ಕಾರ್ಯಪಾಲಕ ಅಭಿಯಂತರ ಎಚ್.ಎಸ್. ನಾಗರಾಜು ಅವರನ್ನು ಅಭಿನಂದಿಸಲಾಗುವುದು ಎಂದು ತಿಳಿಸಿದರು.
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ. ಸಿಇಒ ದಿವ್ಯಾಪ್ರಭು, ಜಿಲ್ಲಾ ಪೊಲೀ ಸ್ ಅಧೀಕ್ಷಕ ಎನ್. ಯತೀಶ್, ನಗರಸಭೆ ಆಯುಕ್ತ ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇ ಶಕ ಎನ್. ಉದಯ ಕುಮಾರ್ ಭಾಗವಹಿಸ ಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ನಾಗಣ್ಣ ಬಾಣಸವಾಡಿ, ಜಿಲ್ಲಾಧ್ಯಕ್ಷ ಎಲ್.ಕೃಷ್ಣ, ಎಸ್. ನಾರಾಯಣ್, ಇಂಡುವಾಳು ಬಸವರಾಜು ಇದ್ದರು.