ಮಳವಳ್ಳಿ ಪಟ್ಟಣದ ರೈತ ಸಮುದಾಯ ಭವನದಲ್ಲಿ ಪುರಸಭೆ ವತಿಯಿಂದ ಪೌರಕಾರ್ಮಿಕರ ದಿನಾಚರಣೆ ನಡೆಯಿತು, ಈ ಸಂದರ್ಭದಲ್ಲಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಪೌರ ಕಾರ್ಮಿಕರ ಜೊತೆಯಲ್ಲಿ ಕುಳಿತು ಊಟ ಸವಿಯುವ ಮೂಲಕ ಗಮನ ಸೆಳೆದರು.
ಸಮಾರಂಭ ಉದ್ಘಾಟಿಸಿ ಮಾತನಾಡಿದ ಶಾಸಕ ನರೇಂದ್ರಸ್ವಾಮಿ ಅವರು, ಪೌರ ಕಾರ್ಮಿಕರಿಗೆ ವಿಶೇಷ ಸೌಲಭ್ಯ ನೀಡುವ ಬಗ್ಗೆ ಚಿಂತನೆ ನಡೆಸಿ ಸರ್ಕಾರದಿಂದ ಕೊಡಿಸುವುದಾಗಿ ಎಂದು ಭರವಸೆ ನೀಡಿದರು.
ಪೌರಕಾರ್ಮಿಕರು ಎಂದು ಕಡೆಗಣಿಸಬಾರದು ಎಲ್ಲರನ್ನು ಸಮಾನತೆ ಕಾಣಬೇಕಾಗಿದೆ ನಿಮ್ಮನ್ನು ಅಗತ್ಯ ಕೆಲಸಗಳಿಗೆ ಮಾತ್ರ ಬಳಸಿಕೊಳ್ಳಬೇಕು, ಇಲ್ಲದಿದ್ದರೆ ಕಾನೂನು ರೀತಿ ಕ್ರಮಗೊಳ್ಳಬಹುದು ಎಂದರು.
ಕ್ರೀಡಾ ಚಟುವಟಿಕೆಗಳಲ್ಲಿ ಗೆದ್ದು ವಿಜೇತರಾದ ಪೌರ ಕಾರ್ಮಿಕರಿಗೆ ಬಹುಮಾನ ವಿತರಿಸಲಾಯಿತು. ಜೊತೆಗೆ ಪೌರಕಾರ್ಮಿಕರಿಗೆ ಸುರಕ್ಷಿತ ಕಿಟ್ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯಾಧಿಕಾರಿ ನಾಗರತ್ನ, ಪುರಸಭಾ ಮಾಜಿ ಅಧ್ಯಕ್ಷ ದೊಡ್ಡಯ್ಯ, ಪರಿಸರ ಇಂಜಿನಿಯರ್ ನಾಗೇಂದ್ರ, ರಾಜಶೇಖರ, ಕೃಷ್ಣ, ಅಯೂಬ್ ಪಾಷ, ವೆಂಕಟೇಶ ಸೇರಿದಂತೆ ಹಲವರು ಇದ್ದರು.




