Tuesday, September 17, 2024

ಪ್ರಾಯೋಗಿಕ ಆವೃತ್ತಿ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ| ಮಂಡ್ಯದಲ್ಲಿ ನೂತನ ಕಚೇರಿ ಉದ್ಘಾಟನೆ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಯಲಿದ್ದು, ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ಪ್ರಾರಂಭಿಸಿದೆ. ಇದರಿಂದಾಗಿ ಭಾನುವಾರ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ನೂತನ ಕಚೇರಿ ಉದ್ಘಾಟಿಸಿ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿದರು.

ಕಚೇರಿಯಲ್ಲಿ ಕವಿವಾಣಿಗಳ ಕಾವ್ಯದ ಸಿಂಚನಗಳ ಪಲಕಗಳನ್ನು ಅಳವಡಿಸಿ ಕನ್ನಡದ ಕಂಪು ಸೂಸುವಂತೆ ಮಾಡಲಾಗಿದೆ.

ಕಚೇರಿ ಉದ್ಘಾಟನೆಯ ನಂತರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ಜಿಲ್ಲೆಯಲ್ಲಿ ನೆನಪಿಸಲಿ ಎಂಬ ಉದ್ದೇಶದಿಂದ ಶ್ರೀಗಂಧದ ಗಿಡವನ್ನು ನೆಟ್ಟು ನೀರೆರೆದರು.

ಈ ಸಂದರ್ಭದಲ್ಲಿ ಮಂಡ್ಯ ಶಾಸಕ ಪಿ.ರವಿಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್‌ ಜೋಷಿ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!