Tuesday, November 24, 2026

ಪ್ರಾಯೋಗಿಕ ಆವೃತ್ತಿ

ಕೇರಳ| ಕುವೈತ್‌ನಿಂದ 45 ಭಾರತೀಯರ ಮೃತದೇಹಗಳನ್ನು ಹೊತ್ತು ತಂದ ವಿಮಾನ

ಕುವೈತ್‌ಗೆ ತೆರಳಿದ್ದ ವಿದೇಶಾಂಗ ಇಲಾಖೆಯ ರಾಜ್ಯ ಖಾತೆಯ ಕೇಂದ್ರ ಸಚಿವ ಕೃತಿ ವರ್ಧನ್‌ ಸಿಂಗ್‌ ಅವರು ವಿಮಾನ ಲ್ಯಾಂಡ್‌ ಆಗಿರುವ ಬಗ್ಗೆ ದೃಢೀಕರಿಸಿದ್ದಾರೆ.

ಕುವೈತ್‌ನ ಮಂಗಾಫ್ ನಗರದ ಆರು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 48 ಮಂದಿ ಸಾವನ್ನಪ್ಪಿದ್ದಾರೆ. ವಸತಿ ಸೌಲಭ್ಯದಲ್ಲಿರುವ 176 ಭಾರತೀಯ ಕಾರ್ಮಿಕರಲ್ಲಿ 45 ಮಂದಿ ಸಾವನ್ನಪ್ಪಿದ್ದು, 33 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ.ಉಳಿದವರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ಭಾರತೀಯರಲ್ಲಿ, 23 ಕೇರಳದಿಂದ, ಏಳು ತಮಿಳುನಾಡಿನಿಂದ, ತಲಾ ಇಬ್ಬರು ಆಂಧ್ರಪ್ರದೇಶ ಮತ್ತು ಒಡಿಶಾದಿಂದ ಮತ್ತು ಬಿಹಾರ, ಮಧ್ಯಪ್ರದೇಶ, ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದ ತಲಾ ಒಬ್ಬರು ಸೇರಿದ್ದಾರೆ.

ಸಂತ್ರಸ್ತರಲ್ಲಿ ಕೆಲವರು ಇತ್ತೀಚೆಗೆ ಕುವೈತ್‌ಗೆ ಕೆಲಸದ ನಿಮಿತ್ತ ತೆರಳಿದ್ದರೆ, ದಶಕಗಳಿಂದ ದೇಶದಲ್ಲಿ ನೆಲೆಸಿರುವ ಹಲವರು ಇದ್ದಾರೆ.

ಸಂತ್ರಸ್ತರಲ್ಲಿ ಹೆಚ್ಚಿನವರು ಕುವೈತ್‌ನಲ್ಲಿ ದೇಶದ ಅತಿದೊಡ್ಡ ನಿರ್ಮಾಣ ಸಂಸ್ಥೆಯಾದ ಎನ್‌ಟಿಬಿಸಿಯಲ್ಲಿ ಕೆಲಸ ಮಾಡುತ್ತಿದ್ದರು. ಬೆಂಕಿ ಹೊತ್ತಿಕೊಂಡ ಕಟ್ಟಡವೂ ಎನ್‌ಟಿಬಿಸಿಗೆ ಸೇರಿದ್ದಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ