Tuesday, November 24, 2026

ಪ್ರಾಯೋಗಿಕ ಆವೃತ್ತಿ

ನೂತನ ತಂತ್ರಾಂಶದಿಂದ ಕಳುವಾಗಿದ್ದ 130 ಮೊಬೈಲ್ ಗಳನ್ನು ಪತ್ತೆ ಹಚ್ಚಿದ ಮಂಡ್ಯ ಪೊಲೀಸರು !

ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸೆಂಟ್ರಲ್ ಎಕ್ಯುಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ ತಂತ್ರಾಂಶದ ಸಹಾಯದಿಂದ ಕಳೆದ ಒಂದು ತಿಂಗಳ ಅವಧಿಯಲ್ಲಿ ಕಳ್ಳತನ, ಕಾಣೆಯಾಗಿದ್ದ ರೂ.23 ಲಕ್ಷ ರೂ. ಬೆಲೆ ಬಾಳುವ ವಿವಿಧ ಮಾದರಿಯ 130 ಮೊಬೈಲ್ ಫೋನ್ ಗಳನ್ನು  ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಎನ್.ಯತೀಶ್ ಹೇಳಿದರು.

ಮಂಡ್ಯನಗರದಲ್ಲಿ ಸುದ್ದಿಗೋ‍ಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಕಳೆದುಕೊಂಡಿದ್ದ ವಿವಿಧ ಮಾದರಿಯ ಮೊಬೈಲ್ ಪೋನ್ ಗಳನ್ನು ದೂರುದಾರರಿಗೆ ಹಿಂದಿರುಗಿಸಲಾಗಿದೆ ಎಂದರು.

nudikarnataka.com

ಮೊಬೈಲ್ ಕಳೆದು ಹೋದರೆ ಏನು ಮಾಡಬೇಕು 
ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಕಳೆದು ಹೋದಲ್ಲಿ ಸಿ.ಇ.ಎನ್ ಪೋರ್ಟಲ್ ಬಳಸಿಕೊಂಡು, ನಿಮ್ಮ ಮೊಬೈಲ್ ನ ಐ.ಎಂ.ಎ ನಂಬರ್ ತೆಗೆದುಕೊಂಡು ಸಮೀಪದ ಪೋಲೀಸ್ ಠಾಣೆಗೆ ದೂರು ನೀಡಿ, ದೂರಿನ ಪ್ರತಿಯನ್ನು ಪಡೆದು ನಿರ್ದಿಷ್ಟ ವೆಬ್ಸೈಟ್ ನಲ್ಲಿ ಲಾಗಿನ್ ಆಗಿ ದೂರನ್ನು ದಾಖಲಿಸಿ ಎಂದರು.

ಮಂಡ್ಯ ಜಿಲ್ಲೆಯ ಎಲ್ಲಾ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಹಾಗೂ ಕಾಣೆಯಾಗಿದ್ದ ಮೊಬೈಲ್ ಪೋನ್‍ಗಳನ್ನು ಪತ್ತೆ ಮಾಡುವ ಸಂಬಂಧವಾಗಿ ಮಂಡ್ಯ ಜಿಲ್ಲಾ ಅಪರ ಪೋಲೀಸ್ ಅಧೀಕ್ಷಕರಾದ ಸಿ.ಇ ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಸಿ.ಇ.ಎನ್ ಅಪರಾಧ ಪೋಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಎನ್. ಜಯಕುಮಾರ್ ನೇತೃತ್ವದಲ್ಲಿ ಪಿ.ಎಸ್.ಐ ರಾಘವೇಂದ್ರ ಎಂ ಕಠಾರಿ, ರಸೂಲಸಾಬ ಎಂ ಗೌಂಡಿ ಹಾಗೂ ಸಿಬ್ಬಂದಿಗಳಾದ ಎ.ಎಂ ರಾಜೇ ಅರಸ್, ಎಸ್. ಗಿರೀಶ್, ಹೆಚ್.ಆರ್ ಸುಮನ್ ಅವರನ್ನೊಳಗೊಂಡಂತೆ ಅಧಿಕಾರಿಯವರ ತಂಡ ರಚನೆ ಮಾಡಲಾಗಿತ್ತು.

ಮಂಡ್ಯ ಸಿ.ಇ.ಎನ್ ಅಪರಾಧ ಪೋಲೀಸ್ ಠಾಣಾ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ಕಾರ್ಯವನ್ನು ಮಂಡ್ಯ ಜಿಲ್ಲಾ ಪೋಲೀಸ್ ವರಿಷ್ಟಾಧಿಧಿಕಾರಿಗಳು ಶ್ಲಾಘಿಸಿ ಪ್ರಶಂಸಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ